ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ ಕಾಗದ ನಗರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿ ನಗದು ವಶಪಡಿಸಿಕೊಂಡಿದ್ದಾರೆ.
ಶನಿವಾರ ರಾತ್ರಿ ಉಜ್ಜಿನೀಪುರ ಮಾರ್ಕೆಟ್ ಸರ್ಕಲ್ ಬಳಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಗ್ರಾಮಾಂತರ ಸಿಪಿಐ ಮಂಜುನಾಥ್ ಹಾಗೂ ಕಾಗದ ನಗರ ಠಾಣೆಯ ಪಿಎಸ್’ಐ ಭಾರತಿ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ, ಬೆಟ್ಟಿಂಗ್ ಆಟಕ್ಕೆ ಬಳಸಿದ್ಧ 25,600 ರೂ. ನಗದು ವಶಪಡಿಸಿಕೊಂಡಿದ್ದಾರೆ.
ಕಾಗದ ನಗರ ಠಾಣೆ ಕ್ರೈಂ. ನಂ. 134/2020, ಕಲಂ 78(1) (ಎ) (ವಿ1), 78(3) ಕೆ.ಪಿ ಆಕ್ಟ್ ಅನ್ವಯ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post