ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸೊರಬ: ಪಟ್ಟಣ ಪಂಚಾಯತಿಯಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದ ಸೊರಬ ಮೊದಲ ಪುರಸಭೆ ಆಡಳಿತವನ್ನು ಬಿಜೆಪಿ ಹಿಡಿದಿದೆ.
ಇಂದು ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಸದಸ್ಯ ಎಂ.ಡಿ. ಉಮೇಶ್ ಅಧ್ಯಕ್ಷರಾಗಿ ಬಿಜೆಪಿಯ ಮಧುರಾಯ್ ಜಿ ಶೇಟ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿ 6, ಕಾಂಗ್ರೆಸ್ 4, ಜೆಡಿಎಸ್ 1, ಪಕ್ಷೇತರ 1, ಸ್ಥಾನ ಗಳಿಸಿತ್ತು. ಶಾಸಕ ಕುಮಾರ್ ಬಂಗಾರಪ್ಪ ಜೆಡಿಎಸ್ ಮತ್ತು ಪಕ್ಷೇತರ ಅಭ್ಯರ್ಥಿಗಳನ್ನು ಬಿಜೆಪಿಯತ್ತ ಸೆಳೆಯುವ ಮೂಲಕ ಅಧಿಕಾರ ಪಡೆದಿದ್ದಾರೆ ಎನ್ನಲಾಗಿದೆ.
ಈ ಚುನಾವಣೆಯಲ್ಲಿ 12 ಸದಸ್ಯರು ಹಾಗೂ 1 ಶಾಸಕರು ಸೇರಿದಂತೆ 13 ಮತಗಳಿವೆ.ಈ ಪೈಕಿ ಬಿಜೆಪಿ 9 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದೆ.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post