ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದಕ್ಷಿಣ ಭಾರತದ ಉದ್ಯಮಿಗಳಿಗೆ ರಾಷ್ಟ್ರೀಯ ಮಟ್ಟದಲ್ಲಿ ಜವಾಬ್ದಾರಿ ಸಿಗುತ್ತಿರುವುದು ವಿಶೇಷವಾದ ಸಂಗತಿಯಾಗಿದ್ದು, ಕೈಗಾರಿಕಾ ಕ್ಷೇತ್ರದಲ್ಲಿ ಚಂದ್ರಶೇಖರ್ ಅವರ ಸಾಧನೆ ಅಪಾರ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಪ್ರಶಂಸೆ ವ್ಯಕ್ತಪಡಿಸಿದರು.
ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಿದ್ದ ದಿ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ ಸಂಘಟನೆ ರಾಷ್ಟ್ರೀಯ ಉಪಾಧ್ಯಕ್ಷ ಡಿ.ಎಸ್. ಚಂದ್ರಶೇಖರ್ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
Also Read: ಸ್ನಾನಗೃಹದಲ್ಲಿ ಅವಿತಿತ್ತು ಬೃಹತ್ ಕಾಳಿಂಗಸರ್ಪ: ರಕ್ಷಣೆಯೇ ಒಂದು ರೋಚಕ
ಮಾಚೇನಹಳ್ಳಿಯ ಶಾಂತಲಾ ಸ್ಪೇರೋಕಾಸ್ಟ್’ನಲ್ಲಿ ಉಪಾಧ್ಯಕ್ಷ ಆಗಿರುವ ಚಂದ್ರಶೇಖರ್ ಅವರು ದಶಕಗಳಿಂದ ಉದ್ಯಮಿಯಾಗಿ ಹಲವಾರು ಜನರಿಗೆ ಉದ್ಯೋಗ ನೀಡಿದ್ದಾರೆ. ನೂರಾರು ಕುಟುಂಬಗಳಿಗೆ ಆಸರೆಯಾಗಿದ್ದಾರೆ. ಉದ್ಯಮ ಕ್ಷೇತ್ರದ ಜತೆಯಲ್ಲಿ ಸೇವಾ ಕ್ಷೇತ್ರದಲ್ಲಿಯು ನಿರಂತರವಾಗಿ ಕೈಜೋಡಿಸುತ್ತಿದ್ದು, ರೋಟರಿ ಕ್ಲಬ್ ಸೇರಿದಂತೆ ವಿವಿಧ ಸಂಘಗಳಲ್ಲಿ ಸೇವೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.
Also Read: 2 ವರ್ಷದ ನಂತರ ಅದ್ದೂರಿಯಾಗಿ ನಡೆದ ದುರ್ಗಿಗುಡಿ ಶ್ರೀಸೀತಾರಾಮ ದೇವರ ಬ್ರಹ್ಮ ರಥೋತ್ಸವ
ಚಂದ್ರಶೇಖರ್ ಅವರ ಕಾರ್ಯಕ್ಕೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಅದ ನಿರಂತರವಾಗಿ ಸಂಪೂರ್ಣ ಸಹಕಾರ ಇರುತ್ತದೆ. ಚಂದ್ರಶೇಖರ್ ಅವರು ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನ ವಹಿಸುತ್ತಿರುವುದು ಶಿವಮೊಗ್ಗ ಜಿಲ್ಲೆ ಹಾಗೂ ರಾಜ್ಯಕ್ಕೆ ಹೆಮ್ಮೆಯ ಸಂಗತಿಯಾಗಿ ಎಂದರು.
ದಿ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ ಸಂಘಟನೆ ರಾಷ್ಟ್ರೀಯ ಉಪಾಧ್ಯಕ್ಷ ಡಿ.ಎಸ್. ಚಂದ್ರಶೇಖರ್ ಅವರಿಗೆ ಶಿವಮೊಮಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಅದ ಸನ್ಮಾನಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಬಿ. ಗೋಪಿನಾಥ್, ರಾಜ್ಯ ಕಾರ್ಯದರ್ಶಿ ವಸಂತ್ ಹೋಬಳಿದಾರ್, ಸಹಕಾರ್ಯದರ್ಶಿ ಜಿ. ವಿಜಯ್ ಕುಮಾರ್, ಸಂತೋಷ್, ರಮೇಶ್ ಹೆಗಡೆ, ಗಣೇಶ ಅಂಗಡಿ, ಪರಮೇಶ್ವರ್, ಶರತ್ ಭೂಪಾಳಂ, ಸಂಘದ ಮಾಜಿ ಅಧ್ಯಕ್ಷ ಡಿ.ಎಂ. ಶಂಕರಪ್ಪ, ಅಶ್ವತ್ಥ್ ನಾರಾಯಣ್, ಮಹೇಂದ್ರಪ್ಪ, ಶೀಲಾ ಚಂದ್ರಶೇಖರ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post