No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Saturday, October 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಿಲ್ಲೆಯಲ್ಲಿ ವಾರ್ಡ್‌ವಾರು ನಾಕಾಬಂಧಿ: ರೋಡಿಗಿಳಿದರೆ ವಾಹನ ಸೀಜ್, ಮೆಡಿಕಲ್ ಶಾಪ್’ಗೂ ನಡೆದುಕೊಂಡೇ ಹೋಗಿ

ಅಗತ್ಯ ವಸ್ತುಗಳನ್ನು ಸ್ಥಳೀಯವಾಗಿ ಖರೀದಿಸಲು ಮಾತ್ರ ಅವಕಾಶ: ಸಚಿವ ಕೆ.ಎಸ್.ಈಶ್ವರಪ್ಪ

kalpa News by kalpa News
May 9, 2021
in ಶಿವಮೊಗ್ಗ
0
ಜಿಲ್ಲೆಯಲ್ಲಿ ವಾರ್ಡ್‌ವಾರು ನಾಕಾಬಂಧಿ: ರೋಡಿಗಿಳಿದರೆ ವಾಹನ ಸೀಜ್, ಮೆಡಿಕಲ್ ಶಾಪ್’ಗೂ ನಡೆದುಕೊಂಡೇ ಹೋಗಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ನಾಳೆಯಿಂದ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನಿಂದ ಲಾಕ್‌ಡೌನ್ ಜಾರಿಯಾಗಲಿದ್ದು, ಜನರು ಅಗತ್ಯ ವಸ್ತುಗಳನ್ನು ಸ್ಥಳೀಯವಾಗಿ ನಡೆದುಕೊಂಡು ಹೋಗಿ ಖರೀದಿಸಲು ಮಾತ್ರ ಅವಕಾಶವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.

ಅವರು ಭಾನುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಸಂಘಸಂಸ್ಥೆಗಳ ಪ್ರತಿನಿಧಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಆಸ್ಪತ್ರೆಗೆ ತೆರಳುವಂತಹ ಅಗತ್ಯ ಸಂದರ್ಭದಲ್ಲಿ ಮಾತ್ರ ವಾಹನ ಬಳಸಬಹುದಾಗಿದೆ. ಮೆಡಿಕಲ್‌ಗಳಿಗೆ ಸ್ಥಳೀಯವಾಗಿ ನಡೆದುಕೊಂಡೇ ಹೋಗಬೇಕು. ಇತರ ಕಾರಣಗಳಿಗೆ ರಸ್ತೆಗೆ ಬರುವ ವಾಹನವನ್ನು ಲಾಕ್‌ಡೌನ್ ಮುಗಿಯುವ ತನಕ ಜಪ್ತಿ ಮಾಡಿ ಕಾನೂನು ಕ್ರಮ ಜರುಗಿಸಲಾಗುವುದು. ಸ್ಥಳೀಯವಾಗಿ ಗುರುತಿಸಲಾಗಿರುವ ಝೋನ್ ವ್ಯಾಪ್ತಿಯಲ್ಲಿ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಪ್ರತಿ ಝೋನ್‌ನಲ್ಲಿ ಚೆಕ್‌ಪೋಸ್ಟ್‌ ಸ್ಥಾಪಿಸಿ ಸಂಚಾರ ನಿರ್ಬಂಧಿಸಲಾಗುವುದು. ಲಾಕ್‌ಡೌನ್ ಬಿಗಿಯಾಗಿ ಜಾರಿಗೊಳಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ನಗರದ ಎಲ್ಲಾ ವಾರ್ಡ್‌ಗಳಲ್ಲಿ ತರಕಾರಿ ಹಣ್ಣುಗಳನ್ನು ಮಾರಾಟ ಮಾಡಲು ಹಾಪ್‌ಕಾಮ್ಸ್‌ಗೆ 70 ವಾಹನಗಳನ್ನು ಒದಗಿಸಲಾಗಿದೆ. ಈ ವಾಹನ ಎಲ್ಲಾ ವಾರ್ಡ್‌ಗಳಲ್ಲಿ ಬೆಳಿಗ್ಗೆ 6ರಿಂದ 12ರವರೆಗೆ ವಾಹನ ಸಂಚರಿಸಿ ಮಾರಾಟ ಮಾಡಲಿದೆ. ಎಪಿಎಂಸಿಯಲ್ಲಿ ಸಗಟು ಮಾರಾಟಕ್ಕೆ ಮಾತ್ರ ಅವಕಾಶವಿದೆ. ಎಪಿಎಂಸಿ ಹೊರಗೆ ಪ್ರಸ್ತುತ ನಡೆಯುತ್ತಿರುವ ಚಿಲ್ಲರೆ ಮಾರಾಟವನ್ನು ನಿಷೇಧಿಸಲಾಗಿದೆ. ತಳ್ಳುಗಾಡಿ ಮಾರಾಟಕ್ಕೆ ಸಹ ಬೆಳಿಗ್ಗೆ 6ರಿಂದ 12ರವರೆಗೆ ಅವಕಾಶ ನೀಡಲಾಗುವುದು. ಗ್ರಾಮೀಣ ಭಾಗದಲ್ಲಿ ವಾರದಲ್ಲಿ ಎರಡು ದಿನ ವಾಹನಗಳ ಮೂಲಕ ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದರು.

ಮೆಗ್ಗಾನ್ ಆಸ್ಪತ್ರೆಯ ಒಳಗೆ ಕೋವಿಡ್ ರೋಗಿಗಳ ಬಳಿಗೆ ಅವರ ಸಂಬಂಧಿಕರು ತೆರಳಲು ಅವಕಾಶ ನೀಡಬಾರದು. ಬೆಳಿಗ್ಗೆ ವಾಕಿಂಗ್ ಹೋಗಲು ಅನುಮತಿ ಇರುವುದಿಲ್ಲ. ಎಲ್ಲಾ ಉದ್ಯಾನವನ, ಸ್ಟೇಡಿಯಂ ಕಟ್ಟುನಿಟ್ಟಿನಿಂದ ಮುಚ್ಚಬೇಕು. ಮದುವೆಗೆ ಒಟ್ಟು 40 ಮಂದಿಗೆ ಮಾತ್ರ ಅವಕಾಶವಿದ್ದು, ಅಗತ್ಯ ಪಾಸುಗಳನ್ನು ತಹಶೀಲ್ದಾರ್ ಕಚೇರಿಯಿಂದ ಪಡೆಯಬೇಕು. ಗಡಿಭಾಗದಲ್ಲಿರುವ ಜಮೀನುಗಳಿಗೆ ಕೃಷಿ ಚಟುವಟಿಕೆಗಳಿಗೆ ತೆರಳಲು ಅನುಮತಿ ನೀಡುವ ಕುರಿತು ಪರಿಶೀಲನೆ ನಡೆಸಬೇಕು ಎಂದು ಹೇಳಿದರು.

ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡುವುದನ್ನು ಯಾವುದೇ ಕಾರಣಕ್ಕೂ ನಿಲ್ಲಿಸಬಾರದು. ಕಾರ್ಮಿಕರನ್ನು ಸಣ್ಣ ಗುಂಪುಗಳಲ್ಲಿ ವಿಂಗಡಿಸಿ ಸಾಮಾಜಿಕ ಅಂತರವನ್ನು ಪಾಲಿಸಿಕೊಂಡು ಕಾಮಗಾರಿ ಅನುಷ್ಟಾನಗೊಳಿಸಬೇಕು ಎಂದು ಅವರು ಸೂಚನೆ ನೀಡಿದರು.
ಕಲ್ಯಾಣ ಮಂದಿರದಲ್ಲಿ ಮದುವೆ ನಡೆಸಬಾರದು ಎಂಬ ಹಿನ್ನೆಲೆಯಲ್ಲಿ ಹಣ ವಾಪಾಸ್ ಕೊಡುವ ಬಗ್ಗೆ ಚರ್ಚಿಸಲಾಯಿತು. ಗಾಯಿತ್ರಿ ಮಾಂಗಲ್ಯ ಮಂದಿರದ ನಟರಾಜ್ ಭಾಗವತ್ ಮಾತನಾಡಿ, ಕಲ್ಯಾಣ ಮಂದಿರಗಳು ಜಾತಿ ಸಮುದಾಯಗಳಿಗೆ ಸೇರಿದವೇ ಹೆಚ್ಚಿವೆ. ಕೇವಲ 30-50 ಸಾವಿರ ಚಾರ್ಜ್ ಮಾಡುವ ಕಲ್ಯಾಣ ಮಂದಿರಗಳಿವೆ. ಇವರೆಲ್ಲರೂ ಮೆಸ್ಕಾಂ, ಮುನ್ಸಿಪಲ್ ಟ್ಯಾಕ್ಸ್‌ ಕಟ್ಟಬೇಕಿದೆ, ಅಲ್ಲಿನ ಸಿಬ್ಬಂದಿಗಳಿಗೆ ಸಂಬಳ ನೀಡಬೇಕು. ಅನೇಕರು ಸಾಲ ಮಾಡಿ ಕಲ್ಯಾಣ ಮಂದಿರ ನಿರ್ಮಿಸಿದ್ದಾರೆ. ಈ ತೆರಿಗೆಗಳೇ 10-12% ಕಟ್ಟಬೇಕು. ಜಿಎಸ್ ಟಿ ಹಣವನ್ನ ಕಟ್ಟಬೇಕಿದೆ. ಈ ಹಿನ್ನೆಲೆಯಲ್ಲಿ ಇದರಲ್ಲಿ ಅನುಕೂಲ ಮಾಡಿಕೊಟ್ಟಲ್ಲಿ ಹಣ ವಾಪಾಸ್ ಮಾಡಬಹುದು. ಕಳೆದ ಬಾರಿ ಸರ್ಕಾರ ಶೇ.70 ರಷ್ಟು ಹಣ ನಿಗದಿಯಾದ ಮದುವೆಗೆ ವಾಪಾಸ್ ಕೊಡಲು ಸೂಚಿಸಿತ್ತು. ಈ ಎಲ್ಲಾ ಟ್ಯಾಕ್ಸ್‌ ಕಡಿಮೆಗೊಳಿಸಿದ್ದಲ್ಲಿ ಶೇ.70 ರಷ್ಟು ಹಣ ಕೊಡಲು ಸಿದ್ದವೆಂದರು.
ಆಟೋ ಮತ್ತು ಕಾರಿನ ಟ್ಯಾಕ್ಸಿಯವರಿಗೆ ಎಮೆರ್ಜೆನ್ಸಿ ಮಾತ್ರ ಅವಕಾಶವಿದೆ. ಗರ್ಭಿಣಿ, ಕೋವಿಡ್ ರೋಗಿ ಓಡಾಡಲು, ವಿಮಾನ ನಿಲ್ದಾಣಕ್ಕೆ ತೆರಳಿದವರಿಗೆ ಮಾತ್ರ ಅವಕಾಶವಿದೆ. ಅನಾವಶ್ಯಕವಾಗಿ ಬಂದರೆ ಪೊಲೀಸರು ತಡೆಯುತ್ತಾರೆ ಎಂದರು.

ಅರ್ಚಕರು ಮಾತನಾಡಿ ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಇರುವುದರಿಂದ ಬೇರೆಡೆ ಹೋಗಿ ಪೂಜೆ ಮಾಡಲು ಅವಕಾಶ ನೀಡಬೇಕು. ದೇವಸ್ಥಾನದ ಪ್ರತಿದಿನ ಪೂಜೆಗೆ ಅರ್ಚಕರನ್ನು ಬಿಡಲು ಕೋರಲಾಯಿತು. ಅರ್ಚಕರು ನಡೆದುಕೊಂಡು ಬೆಳಿಗ್ಗೆ 6 ರಿಂದ 11 ಗಂಟೆಯ ಒಳಗೆ ಅವಕಾಶ ನೀಡಲಾಗಿದೆ ಅಷ್ಟರೊಳಗೆ ನಡೆದುಕೊಂಡು ಹೋಗಿ ಬರಬಹುದೇ ವಿನಾ ಯಾವುದೇ ದ್ವಿಚಕ್ರ ವಾಹನಗಳಿಗೆ ಅವಕಾಶವಿಲ್ಲವೆಂದರು.

ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಅರಗ ಜ್ಞಾನೇಂದ್ರ, ಕುಮಾರ ಬಂಗಾರಪ್ಪ, ಆಯನೂರು ಮಂಜುನಾಥ್, ರುದ್ರೇಗೌಡ, ಪ್ರಸನ್ನ ಕುಮಾರ್, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ. ಅನುರಾಧ ಮತ್ತಿತರ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Corona PositiveCorona VirusCovid19K S EshwarappaKannada News WebsiteKarnataka LockdownLatest News KannadaShimogaShivamoggaShivamogga Newsಲಾಕ್‍ಡೌನ್ಶಿವಮೊಗ್ಗ
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಂಡ್ಯ ಜಿಲ್ಲೆಯಲ್ಲಿರುವ ಭೂವರಾಹನಾಥ ಸ್ವಾಮಿಗೆ ಹರಕೆ ಹೊತ್ತರೆ ಫಲ ನಿಶ್ಚಿತ! ಹೇಗಿದೆ ಗೊತ್ತಾ ದೇವಾಲಯ?

Next Post

ಶಿವಮೊಗ್ಗ ಜಿಲ್ಲೆಯಲ್ಲಿಂದು 857 ಪಾಸಿಟಿವ್, 17 ಮಂದಿ ಸೋಂಕಿಗೆ ಬಲಿ

kalpa News

kalpa News

Next Post
ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಶಿವಮೊಗ್ಗ ಜಿಲ್ಲೆಯಲ್ಲಿಂದು 857 ಪಾಸಿಟಿವ್, 17 ಮಂದಿ ಸೋಂಕಿಗೆ ಬಲಿ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL