ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಫೆ.14ರಿಂದ 16ರವರೆಗೂ ಮೂರು ದಿನಗಳ ಕಾಲ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಫೆ.14ರ ಪ್ರವಾಸ ವಿವರ:
ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ 2.25ಕ್ಕೆ ನ್ಯಾಮತಿ ತಾಲೂಕಿನ ಸುರಗೊಂಡನಕೊಪ್ಪಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸಂತ ಸೇವಾಲಾಲ್ ಅವರ 282ನೆಯ ಜಯಂತ್ಯೋತ್ಸವವನ್ನು ಉದ್ಘಾಟಿಸಲಿದ್ದಾರೆ. ಸಂಜೆ 4.50ಕ್ಕೆ ಶಿಕಾರಿಪುರಕ್ಕೆ ಆಗಮಿಸುವ ಮುಖ್ಯಮಂತ್ರಿಯವರು 5 ಗಂಟೆಗೆ ಶಿಕಾರಿಪುರ ತಾಲೂಕು ಮಟ್ಟದ ಅಧಿಕಾರಿಗಳ(ಕೆಡಿಪಿ) ಸಭೆ ನಡೆಸಲಿದ್ದಾರೆ. ಅಂದು ಶಿಕಾರಿಪುರದಲ್ಲಿಯೇ ಅವರು ವಾಸ್ತವ್ಯ ಹೂಡಲಿದ್ದಾರೆ.ಫೆ.15ರ ಪ್ರವಾಸ ವಿವರ:
ಬೆಳಗ್ಗೆ 10.15ಕ್ಕೆ ಶಿಕಾರಿಪುರದಿಂದ ಹೊರಟು 10.35ಕ್ಕೆ ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಹೆಲಿಪ್ಯಾಡ್’ಗೆ ಆಗಮಿಸಿ ವರ್ಚುವಲ್ ಮೂಲಕ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 12.30 ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಿವಮೊಗ್ಗ-ಭದ್ರಾವತಿ ಪ್ರದೇಶದಲ್ಲಿ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.34, 49 ಹಾಗೂ 52ರ ಬದಲಿ ರಸ್ತೆಯ ಮೇಲ್ಸೇತುವೆ ಕಾಮಗಾರಿಗೆ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ವಿವಿಧ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಅವರು ಅಂದು ಶಿವಮೊಗ್ಗದಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.
ಫೆ.16ರ ಪ್ರವಾಸ ವಿವರ:
ಅಂದು ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಫೆ.17ರ ಪ್ರವಾಸ ವಿವರ:
ಅಂದು ಬೆಳಗ್ಗೆ 10.45ಕ್ಕೆ ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ರಜತ ಮಹೋತ್ಸವ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.
11.30ಕ್ಕೆ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, 12 ಗಂಟೆಗೆ ಸರ್ಕ್ಯೂಟ್ ಹೌಸ್ ಬಳಿ ಈಡಿಗರ ಭವನವನ್ನು ಉದ್ಘಾಟಿಸಲಿದ್ದಾರೆ. 12.30ಕ್ಕೆ ಕೃಷಿ ವಿಶ್ವವಿದ್ಯಾಲಯ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಭಾಗಿತ್ವದಲ್ಲಿ ರಂಗಾಯಣದಲ್ಲಿ ಕೈಗೊಂಡಿರುವ ಅಮೃತ್ ನೋನಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಹೊಳಲೂರಿನಲ್ಲಿ ಕೆಆರ್’ಡಿಸಿಎಲ್ ವತಿಯಿಂದ ಆಯೋಜಿಸಿರುವ ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕುಗಳಿಗೆ ಸಂಪರ್ಕ ಕಲ್ಪಿಸುವ ಸನ್ಯಾಸಿ ಕೋಡುಮಗ್ಗೆ ಮತ್ತು ಹೊಳಲೂರು ಬಳಿ ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಭದ್ರಾವತಿ ತಾಲೂಕಿನ ಆನವೇರಿಯಲ್ಲಿ ಮಾರಮ್ಮ ದೇವಸ್ಥಾನ ಉದ್ಘಾಟನೆ, 3.15ಕ್ಕೆ ಗುಡುಮಘಟ್ಟದಲ್ಲಿ ಈಶ್ವರ ದೇವಸ್ಥಾನ ಉದ್ಘಾಟನೆ ಹಾಗೂ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಮುಖ್ಯಮಂತ್ರಿಗಳು 4 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post