ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಕ್ಟೋಬರ್ 25 ಮತ್ತು 26 ರಂದು ಶಿವಮೊಗ್ಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅ. 25 ರಂದು ಬೆ.09.30 ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆ. 10.50ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 11.30ಕ್ಕೆ ಗೋಪಿಶೆಟ್ಟಿಹಳ್ಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಭವನವನ್ನು ಉದ್ಘಾಟಿಸುವರು.
ಮಧ್ಯಾಹ್ನ 12ಕ್ಕೆ ಪ್ರೆಸ್ ಟ್ರಸ್ಟ್‌ನಲ್ಲಿ ಪತ್ರಿಕಾ ಭವನದ ಭೂಮಿ ಪೂಜೆ ಕಾರ್ಯಕ್ರಮ, 12.15ಕ್ಕೆ ಸರ್ಕಾರಿ ನೌಕರರ ಭವನದ ಮೀಟಿಂಗ್ ಹಾಲ್ ಉದ್ಘಾಟಿಸುವರು. 12.30ಕ್ಕೆ ಸರ್ಕಾರಿ ನೌಕರರ ಭವನದಲ್ಲಿ ಪ್ರೆಸ್ ಟ್ರಸ್ಟ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಹಾಗೂ ಅಂದು ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಅ.26 ರಂದು ವಿವಿಧ ಸ್ಥಳೀಯ ಕಾರ್ಯಕ್ರಮ ಹಾಗೂ ಬೆಳಗ್ಗೆ 10.00ಕ್ಕೆ ಮಾಜಿ ಮುಖ್ಯಮಂತ್ರಿ ಡಿ.ಎಸ್. ಬಂಗಾರಪ್ಪರವರ 87ನೇ ಜನ್ಮ ಸ್ಮರಣೆ ಹಾಗೂ ಸೊರಬ ಪಟ್ಟಣದ ಉದ್ಯಾನವನದ ಉದ್ಘಾಟನಾ ಸಮಾರಂಭದಲ್ಲಿ ಆನ್‌ಲೈನ್ ಮೂಲಕ ಪಾಲ್ಗೊಳ್ಳುವರು. ಬೆಳಗ್ಗೆ 11.00ಕ್ಕೆ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ತೆರಳಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post