ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ದೇಶದಾದ್ಯಂತ ಕಾಂಗ್ರೆಸ್ ಧೂಳಿಪಟವಾಗುತ್ತಿದ್ದು, ಬಿಜೆಪಿ ಬೆಳೆಯುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ರಾಜ್ಯದ ಎರಡು ಕ್ಷೇತ್ರಗಳ ಉಪಚುಣಾವಣೆ ಹಾಗೂ ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಉಪಚುನಾವಣೆ ಮುಂದಿನ ಚುನಾವಣೆಯ ದಿಕ್ಸೂಚಿಯಾಗಲಿದೆ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದರು. ಅದನ್ನು ನಾನು ಸವಾಲಾಗಿ ಸ್ವೀಕರಿಸುತ್ತೇನೆ ಎಂದು ಹೇಳಿದ್ದೆ. ಈಗ ಫಲಿತಾಂಶ ಬಿಜೆಪಿ ಪರವಾಗಿ ಬಂದಿದೆ. ಹೀಗಾಗಿ, ಕಾಂಗ್ರೆಸ ಮುಖಂಡರು ಹೇಳಿದಂತೆ ಇದು ಮುಂದಿನ ಚುನಾವಣೆಯ ದಿಕ್ಸೂಚಿಯಾಗಲಿದ್ದು, ಬಿಜೆಪಿಯ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು.
ಸಿದ್ಧರಾಮಯ್ಯ ಹೇಳುವುದು ಎಲ್ಲವೂ ಸುಳ್ಳು. ಆರ್.ಆರ್ ನಗರ ಹಾಗೂ ಶಿರಾದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು, ಇದು ದಿಕ್ಸೂಚಿಯಾಗಲಿದೆ. ಬಿಹಾರದಲ್ಲೂ ಸಹ ಎನ್’ಡಿಎ ಗೆಲ್ಲುವುದಿಲ್ಲ ಎಂದರು. ಆದರೆ, ಇಂದು ಫಲಿತಾಂಶ ಏನಾಗಿದೆ ಎಂಬುದನ್ನು ದೇಶವೇ ನೋಡಿದೆ. ಇವೆಲ್ಲವೂ ಸಿದ್ದರಾಮಯ್ಯನವರು ಹೇಳುವುದಲ್ಲವೂ ಸುಳ್ಳು ಎಂಬುದನ್ನು ತೋರಿಸುತ್ತದೆ. ಈ ರೀತಿಯ ಸುಳ್ಳು ಹೇಳುವ ಸಿದ್ದರಾಮಯ್ಯನವರು ರಾಜ್ಯ ಜನರ ಕ್ಷಮೆ ಕೇಳಬೇಕು ಎಂದರು.
ನರೇಂದ್ರ ಮೋದಿಯವರ ನೇತೃತ್ವದ ಎನ್’ಡಿಎಯನ್ನು ದೇಶ ಬೆಂಬಲಿಸುತ್ತಿದೆ ಎಂಬುದಕ್ಕೆ ಬಿಹಾರ ಚುನಾವಣೆ ಸಾಕ್ಷಿ. ದೇಶದ ಜನ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಬೆಂಬಲವನ್ನು ಮುಂದುವರೆಸಿದ್ದಾರೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post