ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಹೇಳುವವರು, ಕೇಳುವವರು ಯಾರೂ ಇಲ್ಲದ ಪಕ್ಷವೆಂದರೆ ಅದು ಕಾಂಗ್ರೆಸ್ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದರು.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370ನ್ನು ಮರುಸ್ಥಾಪನೆ ಮಾಡುತ್ತೇವೆ ಎಂದಿರುವ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರ ಹೇಳಿಕೆಯನ್ನು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಖಂಡಿಸುತ್ತಾರಾ? ಎಂದು ಪ್ರಶ್ನಿಸಿದರು.
ನಮ್ಮ ಪಕ್ಷದಲ್ಲಿ ಭಿನ್ನಾಭಿಪ್ರಾಯ ಕಂಡುಬಂದರೆ ತತಕ್ಷಣ ಅದನ್ನು ವರಿಷ್ಠರು ಸರಿಪಡಿಸುತ್ತಾರೆ ಹಾಗೂ ಹೇಳಿಕೆಗಳನ್ನು ನೀಡದಂತೆ ಸೂಚಿಸುತ್ತಾರೆ. ಆದರೆ, ಕಾಂಗ್ರೆಸ್ ಪಕ್ಷದಲ್ಲಿ ಹಾಗಿಲ್ಲ. ಹೀಗಾಗಿ, ಹೇಳುವವರು ಕೇಳುವವರು ಇಲ್ಲದ್ದು ಕಾಂಗ್ರೆಸ್ ಪಕ್ಷ. ಹೇಳುವವರು ಕೇಳುವವರು ಇರುವುದು ಬಿಜೆಪಿ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post