No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡಿ.ಎಸ್. ಅರುಣ್ ಕಾರ್ಯ ರಾಜ್ಯದ ಯುವಜನರಿಗೆ ಸ್ಪೂರ್ತಿ: ಮಾಜಿ ಡಿಸಿಎಂ ಈಶ್ವರಪ್ಪ ಬಣ್ಣನೆ

kalpa News by kalpa News
November 21, 2022
in ಶಿವಮೊಗ್ಗ
0
ಡಿ.ಎಸ್. ಅರುಣ್ ಕಾರ್ಯ ರಾಜ್ಯದ ಯುವಜನರಿಗೆ ಸ್ಪೂರ್ತಿ: ಮಾಜಿ ಡಿಸಿಎಂ ಈಶ್ವರಪ್ಪ ಬಣ್ಣನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸೇವಾ ಕಾರ್ಯ ಹಾಗೂ ಸಮಾಜಮುಖಿ ಆಲೋಚನೆಯನ್ನು ನಿರಂತರವಾಗಿ ಕಾರ್ಯರೂಪಕ್ಕೆ ತರುತ್ತಿರುವ ಯಶಸ್ವಿ ಯುವ ನಾಯಕ ಡಿ.ಎಸ್. ಅರುಣ್ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಬಣ್ಣಿಸಿದರು.

ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ 50ನೆಯ ಜನ್ಮದಿನ ಹಾಗೂ ಶಾಸಕರಾಗಿ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಡಿ.ಎಸ್. ಅರುಣ್ ಅಭಿಮಾನಿಗಳ ಬಳಗದ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭ, ಒಂದು ಅವಲೋಕನ ಹಾಗೂ ಸಮಾಜ ಸೇವಾ ಕಾರ್ಯಗಳು ಕುರಿತ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯುವ ಜನರಿಗೆ ಸ್ಫೂರ್ತಿ ತುಂಬುವ ರೀತಿಯಲ್ಲಿ ರಾಜ್ಯದಲ್ಲಿ ಮಾದರಿಯಾಗಿ ಕೆಲಸ ಮಾಡುತ್ತಿದ್ದಾರೆ. ಗ್ರಾಮ ಪಂಚಾಯತಿಗಳ ಸಬಲೀಕರಣ, ಉದ್ಯಮಿಗಳಿಗೆ ಪೂರಕ ಯೋಜನೆಗಳ ಅನುಷ್ಠಾನ ಸೇರಿದಂತೆ ಎಲ್ಲರ ಧ್ವನಿಯಾಗಿ ವಿಧಾನ ಪರಿಷತ್ ನಲ್ಲಿ ಶಾಸಕರಾಗಿ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಉತ್ತಮ ಸಾಧನೆ ಮಾಡುವಂತಾಗಲಿ ಎಂದು ಆಶಿಸಿದರು.

ತಂದೆ ಡಿ.ಎಚ್. ಶಂಕರಮೂರ್ತಿ ಅವರಂತೆ ದೇಶಭಕ್ತಿ ವಿಚಾರಧಾರೆಯನ್ನು ಮೈಗೂಡಿಸಿಕೊಂಡು ಬೆಳೆಯುತ್ತಿರುವ ಯುವ ನಾಯಕ ಅರುಣ್ ಅವರು ಯುವ ಸಮುದಾಯಕ್ಕೆ ಪ್ರೇರಣೆ ಆಗಿದ್ದಾರೆ ಎಂದರು.

ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ವಿಧಾನ ಪರಿಷತ್ ಸದಸ್ಯರಾಗಿ ಒಂದು ವರ್ಷದಲ್ಲಿಯೇ ಅನೇಕ ಜನಪರ ಕಾರ್ಯಗಳನ್ನು ರಾಜ್ಯಮಟ್ಟದಲ್ಲಿ ಅನುಷ್ಠಾನ ಆಗುವಲ್ಲಿ ಕಾರಣ ಆಗಿರುವ ನಾಯಕ ಅರುಣ್, ಗ್ರಾಮ ಪಂಚಾಯತಿ ಸದಸ್ಯರ ಪರ ಪರಿಷತ್ ನಲ್ಲಿ ಧ್ವನಿಯಾಗುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರು ಮಾಡಿರುವ ಸೇವಾಕಾರ್ಯಗಳೇ ಶ್ರೀ ರಕ್ಷೆ ಎಂದು ಹೇಳಿದರು.
ಅಭಿಮಾನಿ ಬಳಗದ ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ಪಕ್ಷದ ಮುಖಂಡರ ಮಾರ್ಗದರ್ಶನ ಹಾಗೂ ಎಲ್ಲರ ಪ್ರೀತಿ ಸಹಕಾರ, ಪ್ರೋತ್ಸಾಹದಿಂದ ಜೀವನದಲ್ಲಿ ಸಾಧನೆಯ ಹೆಜ್ಜೆ ಇಡುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ಹಾಗೂ ಸಹಕಾರ ದಿಂದ ಸಾರ್ವಜನಿಕ ಸೇವೆಯನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದು ತಿಳಿಸಿದರು.

ವಾಸವಿ ಸಂಸ್ಥೆಯ ಎಸ್.ಕೆ. ಶೇಷಾಚಲ ಮಾತನಾಡಿ, ಸ್ನೇಹಮಹಿ ವ್ಯಕ್ತಿತ್ವ ಹೊಂದಿರುವ ಅರುಣ್ ದಶಕಗಳಿಂದ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದು, ವಿಧಾನ ಪರಿಷತ್ ಸದಸ್ಯರಾಗಿಯು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಲ್ಲ ಸಂಘ ಸಂಸ್ಥೆಗಳ ಜತೆಯು ಉತ್ತಮ ಒಡನಾಟ ಹೊಂದಿದ್ದಾರೆ. ಸರಳತೆಯ ರಾಜಕಾರಣಿ ಅರುಣ್ ಎಂದು ಶ್ಲಾಘಿಸಿದರು.
ಡಿ.ಎಸ್. ಅರುಣ್ ಅಭಿಮಾನಿಗಳ ಬಳಗದ ಸಂಚಾಲಕ ಶಶಿಧರ್‌ಎಸ್. ಭೂಪಾಳಂ ಮಾತನಾಡಿ, ಅರುಣ್ ಸೇವಾ ಕ್ಷೇತ್ರದ ಕೊಡುಗೆ ಎಲ್ಲ ವರ್ಗದ ಜನರಿಗೂ ತಲುಪಿದೆ. ಅಪಾರ ಅಭಿಮಾನಿ ಬಳಗ ಹೊಂದಿರುವ ಅರುಣ್ ಅವರು ಜೀವನದಲ್ಲಿ ಎಲ್ಲ ಯಶಸ್ಸು ಸಾಧಿಸಿ ಉನ್ನತ ಸ್ಥಾನ ಅಲಂಕರಿಸುವಂತಾಗಲಿ ಎಂಬುದು ಸ್ನೇಹಿತರು, ಅಭಿಮಾನಿಗಳ ಆಶಯ ಎಂದು ತಿಳಿಸಿದರು.

ಅರುಣ್ ಜನ್ಮದಿನ ಪ್ರಯುಕ್ತ ದಿನಪೂರ್ತಿ ವೈವಿಧ್ಯಮಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹೊಲಿಗೆ ಯಂತ್ರಗಳ ವಿತರಣೆ, ಕ್ಷಯ ರೋಗಿಗಳಿಗೆ ಪೌಷ್ಠಿಕ ಆಹಾರ ಕಿಟ್, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕಿಟ್ ವಿತರಣೆ, ಸಮಾಜಸೇವೆ ಮಾಡುತ್ತಿರುವ ಐದು ಸಂಸ್ಥೆಗಳಿಗೆ ಪ್ರೋತ್ಸಾಹ ಧನ, ಕ್ರೀಡಾಂಗಣ ಅಭಿವೃದ್ಧಿ, ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಐದು ಪಂಚಾಯಿತಿಗಳಿಗೆ ಅಭಿನಂದನೆ, 50ಕ್ಕೂ ಹೆಚ್ಚು ಜನರಿಂದ ರಕ್ತದಾನ ಶಿಬಿರ ಸೇರಿದಂತೆ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಬೆಂಗಳೂರು ವಾಸವಿ ಪೀಠದ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ, ಜಡೆ ಸಂಸ್ಥಾನ ಮಠದ ಶ್ರೀ ಡಾ. ಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಇಪ್ಪತ್ತಕ್ಕೂ ಹೆಚ್ಚು ಸಂಘ ಸಂಸ್ಥೆಗಳು ಅರುಣ್ ಅವರಿಗೆ ಜನ್ಮದಿನದ ಶುಭಾಶಯ ಕೋರಿ ಸನ್ಮಾನಿಸಿದರು. ಸ್ನೇಹಿತರು, ಅಭಿಮಾನಿಗಳು ಶುಭಹಾರೈಸಿದರು.

ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಎಸ್. ಶಿವಕುಮಾರ್, ಉಪ ಮೇಯರ್ ಲಕ್ಷ್ಮೀ, ಡಿ.ಎಸ್.ಅರುಣ್ ಅಭಿಮಾನಿಗಳ ಬಳಗದ ಸಂಚಾಲಕ ಶಶಿಧರ್ ಎಸ್. ಭೂಪಾಳಂ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BJPD S ArunK S EshwarappaKannada News WebsiteLatest News Kannadaಕೆ.ಎಸ್. ಈಶ್ವರಪ್ಪಡಿ.ಎಸ್. ಅರುಣ್ವಿಧಾನ ಪರಿಷತ್ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ
Share221Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನ.25ರಂದು ಭದ್ರಾವತಿಗೆ ಆಗಮಿಸಲಿದ್ದಾರೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳು

Next Post

ಸಹಕಾರಿ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲ: ಪ್ರಸನ್ನಕುಮಾರ್

kalpa News

kalpa News

Next Post
ಸಹಕಾರಿ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲ: ಪ್ರಸನ್ನಕುಮಾರ್

ಸಹಕಾರಿ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲ: ಪ್ರಸನ್ನಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!