ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಹತ್ರಾಸ್ ಅತ್ಯಾಚಾರ ಪ್ರಕರಣ ಹಾಗೂ ರಾಹುಲ್ ಗಾಂಧಿ ಅವರ ಮೇಲೆ ದೌರ್ಜನ್ಯ ನಡೆಸಲಾಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಗಾಂಧಿ ಪಾರ್ಕ್’ನಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಗಾಂಧಿ ಪಾರ್ಕ್’ನಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ, ಕೇಂದ್ರ ಹಾಗೂ ಉತ್ತರ ಪ್ರದೇಶ ಸರ್ಕಾರದ ನೀತಿಯನ್ನು ಖಂಡಿಸಿದರು.
ಉತ್ತರಪ್ರದೇಶ ಹಾಥರಸ್ ಗ್ರಾಮದ ಯುವತಿ ಮೋನಿಷಾಳ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ನಡೆಸಿ, ಹತ್ಯೆ ಮಾಡಿದ್ದನ್ನು ಖಂಡಿಸಿ ಹಾಗೂ ಅತ್ಯಾಚಾರ ಘಟನೆಯಿಂದ ನೊಂದ ಸಂತ್ರಸ್ತರ ಕುಟುಂಬವನ್ನು ಭೇಟಿ ಮಾಡಲು ಗ್ರಾಮಕ್ಕೆ ಎಐಸಿಸಿಯ ನಾಯಕರಾದ ರಾಹುಲ್ ಗಾಂಧಿ ಮತ್ತು ಯುಪಿ ಕಾಂಗ್ರೆಸ್’ನ ಉಸ್ತುವಾರಿ ಪ್ರಿಯಾಂಕಾ ವಾದ್ರಾ ತೆರಳುತ್ತಿದ್ದಾಗ ಪೊಲೀಸರು ತಡೆದಿದ್ದು ಮಾತ್ರವಲ್ಲದೇ ರಾಹುಲ್ ಗಾಂಧಿ ಅವರ ಕೊರಳಪಟ್ಟಿ ಹಿಡಿದು ಕತ್ತಿಗೆ ಕೈಹಾಕಿ ನೆಲಕ್ಕೆ ಉರುಳಿಸಿದ್ದಾರೆ ಎಂದು ಪ್ರತಿಭಟನೆ ವೇಳೆ ಆರೋಪಿಸಿದರು.
ಕೇಂದ್ರ ಹಾಗೂ ಉತ್ತರ ಪ್ರದೇಶ ಸರ್ಕಾರಗಳು ಧಮನಿತ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ, ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್. ಸುಂದರೇಶ್, ವಿಧಾನಪರಿಷತ್ ಸದಸ್ಯರು, ಮಾಜಿ ಸದಸ್ಯರು, ಮಾಜಿ ಶಾಸಕರು, ಡಿಸಿಸಿ ಮಾಜಿ ಅಧ್ಯಕ್ಷರು, ಲೋಕಸಭೆ ಮತ್ತು ವಿಧಾನಸಭೆಯ, ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳು, ಕಾಂಗ್ರೆಸ್ ಪಕ್ಷ ಎಲ್ಲಾ ಮುಖಂಡರು ಮತ್ತುಕಾರ್ಯಕರ್ತರು ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post