ಕಲ್ಪ ಮೀಡಿಯಾ ಹೌಸ್
ಸೊರಬ: ಪ್ರಾಣದ ಹಂಗನ್ನೂ ಲೆಕ್ಕಿಸದೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ಶನಿವಾರ ಕೊರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಯಿಗೆ ಮೂರನೇ ಹೆರಿಗೆಯಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ.
ಪಟ್ಟಣದ ಕಾನಕೇರಿ ನಿವಾಸಿಯಾಗಿರುವ ಸುಮಾರು 28 ವರ್ಷದ ಗರ್ಭಿಣಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಮಗು ಜನನದ ಮೊದಲೇ ಕರುಳ ಬಳ್ಳಿ ಹೊರ ಬಿದ್ದಿತ್ತು. ಕನಿಷ್ಟ 15 ನಿಮಿಷ ತಡವಾಗಿದ್ದರೂ ತಾಯಿ ಮತ್ತು ಮಗು ಪ್ರಾಣಾಪಾಯ ಎದುರಿಸಬೇಕಿತ್ತು. ತಮ್ಮ ಪ್ರಾಣವನ್ನು ಸಹ ಲೆಕ್ಕಿಸದ ವೈದ್ಯರ ತಂಡ ಗರ್ಭಿಣಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆ ಮಾಡಿಸಿದ್ದಾರೆ.

(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post