ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೋವಿಡ್ ಸೋಂಕಿಗೆ ಯಾರು ಹೆದರುವ ಅವಶ್ಯಕತೆ ಇಲ್ಲ. ಬದಲಾಗಿ ಲಸಿಕೆ ಹಾಕಿಸಿಕೊಂಡು, ಸರ್ಕಾರದ ನಿಯಮಗಳನ್ನು ಪಾಲಿಸಿ ಎಂದು ಬಿಜೆಪಿ ಮುಖಂಡ ಡಿ.ಎಸ್. ಅರುಣ್ ಕರೆ ನೀಡಿದರು.
ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟದ ಜಿಲ್ಲಾ ಘಟಕದಿಂದ ಪತ್ರಕರ್ತರಿಗೆ ಹಾಗೂ ಪತ್ರಿಕಾ ಕಚೇರಿ ಸಿಬ್ಬಂದಿಗಳಿಗೆ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕೊರೋನಾ ವೈರಸ್ ಚೈನ್ ಲಿಂಕ್ ತುಂಡರಿಸಲು ಸರ್ಕಾರ ಎಲ್ಲ ಕ್ರಮ ಕೈಗೊಂಡಿದೆ. ಆದರೆ ಸೋಂಕನ್ನು ತಡೆಯಲು ಲಸಿಕೆ ಹಾಕಿಸಿಕೊಳ್ಳುವುದು ಪರಿಣಾಮಕಾರಿ ಮಾರ್ಗ. ಹೀಗಾಗಿ ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಿ ಎಂದರು.ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಮೆಗ್ಗಾನ್ ಆಸ್ಪತ್ರೆಯಲ್ಲಿ ಯಾವುದೇ ಖಾಸಗಿ ಆಸ್ಪತ್ರೆಗೆ ಕಡಿಮೆ ಎಲ್ಲದಂತೆ ವ್ಯವಸ್ತೆ ಮಾಡಲಾಗಿದೆ. ಗರಿಷ್ಟ ಚಿಕಿತ್ಸೆ ನೀಡಲಾಗುತ್ತಿದ್ದು, ಯಾರೂ ಹೆದರುವ ಅಗತ್ಯ ಇಲ್ಲ ಎಂದರು.ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟದ ಜಿಲ್ಲಾ ಘಟಕದಿಂದ ಈ ಅಭಿಯಾನ ನಡೆಸುತ್ತಿರುವುದು ಸಂತೋಷದ ವಿಚಾರ ಎಂದರು.
ಲಸಿಕೆ ಹಾಕುವ ಮುನ್ನ ಪ್ರತಿಯೊಬ್ಬರಿಗೂ ಕೋವಿಡ್ ಟೆಸ್ಟ್ ನಡೆಸಲಾಯಿತು.ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಡಿಸೋಜಾ, ಜಿಲ್ಲಾ ಅಧ್ಯಕ್ಷ ಷಡಕ್ಷರಪ್ಪ, ಪ್ರಮುಖರಾದ ಹೆಚ್.ಎನ್. ಮಂಜುನಾಥ್, ಸತೀಶ್, ಗಣೇಶ್, ವೈದ್ಯರಾದ ಉಮಾ ಸೇರಿದಂತೆ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post