ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕರ್ನಾಟಕ ರಾಜ್ಯವನ್ನು ಡ್ರಗ್ಸ್ ಮುಕ್ತವನ್ನಾಗಿ ಮಾಡಲು ರಾಜ್ಯ ಸರ್ಕಾರ ಪಣ ತೊಟ್ಟಿದ್ದು, ಈ ಮಾಫಿಯಾವನ್ನು ಹೆಡೆಮುರಿ ಕಟ್ಟುತ್ತೇವೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಗುಡುಗಿದ್ದಾರೆ.
ಶಿವಪ್ಪ ನಾಯಕ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಡ್ರಗ್ಸ್ ಮುಕ್ತ ಕರ್ನಾಟಕ ಸಹಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಡ್ರಗ್ಸ್ ಎಂಬ ಪಿಡುಗು ದಶಕಗಳ ಕಾಲದಿಂದಲೂ ಕಾಡುತ್ತಿದೆ. ಮಾದಕ ವಸ್ತು ಹಾಗೂ ಲೈಂಗಿಕ ಚಟುವಟಿಕೆಗಳು ಇದರಡಿಯಲ್ಲೇ ನಡೆಯುತ್ತಿವೆ. ಸಮಾಜಕ್ಕೆ ಕಂಟಕವಾಗಿ ಕಾಡುತ್ತಿರುವ ಇದನ್ನು ಮಟ್ಟ ಹಾಕಲು ರಾಜ್ಯ ಸರ್ಕಾರ ದಿಟ್ಟ ನಿಲುವು ಕೈಗೊಂಡಿದೆ ಎಂದರು.
ಡ್ರಗ್ಸ್ ಮಟ್ಟ ಹಾಕಲು ವಿಧಾನ ಮಂಡಲದಲ್ಲಿ ಚರ್ಚೆ ನಡೆಸಲಾಯಿತು. ಆದರೆ, ರಾಜ್ಯ ಸರ್ಕಾರದ ನಿಲುವಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಮ್ಮ ಅವಧಿಯಲ್ಲಿ ಡ್ರಗ್ಸ್ ಮಾಫಿಯಾವನ್ನು ಮಟ್ಟ ಹಾಕಲು ನಿರ್ಧಾರ ಕೈಗೊಳ್ಳಲಾಗಿದ್ದು, ಈ ವಿಚಾರದಲ್ಲಿ ಪೊಲೀಸರ ಬೆನ್ನಿಗೆ ನಾವಿದ್ದೇವೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















