No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Sunday, August 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಇ ತ್ಯಾಜ್ಯ ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಆಗಬೇಕಾದ ಅಗತ್ಯವಿದೆ: ಡಿಸಿ ಸೆಲ್ವಮಣಿ ಅಭಿಮತ

ಶಾಲಾ ಹಂತದಿಂದ ವಿದ್ಯಾರ್ಥಿಗಳಿಗೆ ಈ ತ್ಯಾಜ್ಯದ ಅರಿವು ಮೂಡಿಸಿ: ಡಾ.ಧನಂಜಯ ಸರ್ಜಿ ಕರೆ

kalpa News by kalpa News
October 14, 2022
in ಶಿವಮೊಗ್ಗ
0
ಇ ತ್ಯಾಜ್ಯ ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಆಗಬೇಕಾದ ಅಗತ್ಯವಿದೆ: ಡಿಸಿ ಸೆಲ್ವಮಣಿ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರತಿ ದಿನದ ಜೀವನದಲ್ಲಿ ಇಲೆಕ್ಟ್ರಾನಿಕ್ ವಸ್ತುಗಳ ಬಳಕೆ ಸಾಮಾನ್ಯ ಆಗಿದ್ದು, ತ್ಯಾಜ್ಯ ಉತ್ಪತ್ತಿಯು ಅಧಿಕವಾಗಿದೆ. ಇ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿ ಮಾಡುವುದು ಪ್ರಸ್ತುತ ಅತ್ಯಂತ ಅವಶ್ಯಕ ಎಂದು ಜಿಲ್ಲಾಧಿಕಾರಿ ಡಾ‌. ಸೆಲ್ವಮಣಿ ಹೇಳಿದರು.

ಅಂತರಾಷ್ಟ್ರೀಯ ಇ ತ್ಯಾಜ್ಯ ದಿನದ ಪ್ರಯುಕ್ತ ಶಿವಮೊಗ್ಗ ನಗರದ ಎಟಿಎನ್‌ಸಿಸಿ ಕಾಲೇಜಿನ ಚಂದನ ಸಭಾಂಗಣದಲ್ಲಿ ಆಯೋಜಿಸಿದ್ದ “ಇ ತ್ಯಾಜ್ಯ ಅರಿವು ಮತ್ತು ವಿಲೇವಾರಿ ಅಭಿಯಾನ” ಉದ್ಘಾಟಿಸಿ‌ ಮಾತನಾಡಿದರು.

ಎರಡು ‌ದಶಕಗಳಲ್ಲಿ ಇಲೆಕ್ಟ್ರಾನಿಕ್ ವಸ್ತುಗಳ ಬಳಕೆ ಹೆಚ್ಚಿದ್ದು, ಅದೇ ರೀತಿಯಲ್ಲಿ ತ್ಯಾಜ್ಯ ಕೂಡ ಅಧಿಕವಾಗಿದೆ. ದಿನನಿತ್ಯ ಉತ್ಪತ್ತಿ ಆಗುವ ಇ ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಆಗುತ್ತಿಲ್ಲ. ಇದರಿಂದ ಪರಿಸರದ ಮೇಲೆ ಪರಿಣಾಮ ಬೀರುತ್ತಿದೆ ಎಂದು ತಿಳಿಸಿದರು.
ಇ ತ್ಯಾಜ್ಯವನ್ನು ಮರು ಬಳಕೆ ಮತ್ತು ಮರು ಉಪಯೋಗ ಮಾಡಬಹುದಾಗಿದೆ. ಬೆಂಗಳೂರು ನಗರದಲ್ಲಿ ಇ ತ್ಯಾಜ್ಯ ವಿಲೇವಾರಿ ಸಂಸ್ಥೆಗಳು ಆರಂಭವಾಗುತ್ತಿವೆ. ಶಿವಮೊಗ್ಗ ಜಿಲ್ಲೆಯಲ್ಲೂ ಇ ತ್ಯಾಜ್ಯದ ಸಮರ್ಪಕ ವೈಜ್ಞಾನಿಕ ವಿಲೇವಾರಿ ಬಗ್ಗೆ ಕ್ರಮ ವಹಿಸಲಾಗುತ್ತಿದೆ ಎಂದರು.

ಶಿವಮೊಗ್ಗ‌ ಮಹಾನಗರ ಪಾಲಿಕೆ ಮೇಯರ್‌ ಸುನೀತಾ‌ ಅಣ್ಣಪ್ಪ ಮಾತನಾಡಿ, ನಗರದ ಸ್ವಚ್ಚತೆ ಕಾಪಾಡುವ ದೃಷ್ಟಿಯಿಂದ ಪಾಲಿಕೆ ವತಿಯಿಂದ ಎಲ್ಲ ರೀತಿ ಕ್ರಮ ವಹಿಸಲಾಗುತ್ತಿದೆ. ಅದರ ಜತೆಯಲ್ಲಿ ಸಾರ್ವಜನಿಕರ ಪಾತ್ರವು ಬಹಳ ಮುಖ್ಯ. ಇ ತ್ಯಾಜ್ಯ ವಿಲೇವಾರಿ ಬಗ್ಗೆಯೂ ಪಾಲಿಕೆ ಜಿಲ್ಲಾಡಳಿತದ ಸಹಕಾರದಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಗೋಪಿನಾಥ್‌ ಮಾತನಾಡಿ, ದಿನ ನಿತ್ಯ ಇಲೆಕ್ಟ್ರಾನಿಕ್ ವಸ್ತುಗಳ ಬಳಕೆ ಹೆಚ್ಚುತ್ತಿದ್ದು, ಪ್ರತಿ ವರ್ಷ ತ್ಯಾಜ್ಯ ಉತ್ಪತ್ತಿ‌ ಅಧಿಕವಾಗುತ್ತಿದೆ. ಮುಂದಿನ ದಿನಗಳಲ್ಲಿ ದೊಡ್ಡ ಸಮಸ್ಯೆಯಾಗಿ ಇಡೀ ವಿಶ್ವವನ್ನು ಕಾಡಲಿದೆ. ಇ ತ್ಯಾಜ್ಯದ ಅರಿವು ಮತ್ತು ವಿಲೇವಾರಿ ಬಗ್ಗೆ ಸಮಾಜದ ಪ್ರತಿಯೊಬ್ಬರು ಗಮನ ವಹಿಸಬೇಕಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ನಾರಾಯಣರಾವ್‌ ಮಾತನಾಡಿ, ಪರಿಸರ ಸಂರಕ್ಷಣೆ ಹಾಗೂ ಉತ್ತಮ ವಾತಾವರಣ ಕಾಪಾಡುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿ ಆಗಿದೆ. ಪರಿಸರ ಮಾಲಿನ್ಯ ಆಗುವುದನ್ನು ತಪ್ಪಿಸಬೇಕು. ಪರಿಸರ ಸಂರಕ್ಷಣೆ ಸಮಾಜದ ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು.
ಸರ್ಜಿ ಫೌಂಡೇಷನ್‌ ಮ್ಯಾನೇಜಿಂಗ್‌ ಟ್ರಸ್ಟಿ ಡಾ. ಧನಂಜಯ ಸರ್ಜಿ ಮಾತನಾಡಿ, ಮಣ್ಣು, ನೀರು, ಗಾಳಿ ಸೇರಿದಂತೆ ಪರಿಸರದಲ್ಲಿ ರಾಸಾಯನಿಕ ಮಿಶ್ರಿತ ಆಗುತ್ತಿರುವ ವಾತಾವರಣ ನಾವೆಲ್ಲರೂ ನೋಡುತ್ತಿದ್ದೇವೆ. ರಾಸಾಯನಿಕ ಮಿಶ್ರಿತ ವಾತಾವರಣದಿಂದ ಎಲ್ಲರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ತ್ಯಾಜ್ಯದ ವೈಜ್ಞಾನಿಕ ವಿಲೇವಾರಿ ಮೂಲಕ ಆರೋಗ್ಯಕರ ಪರಿಸರ ನಿರ್ಮಿಸಬೇಕಿದೆ ಎಂದು ಹೇಳಿದರು.

ಇ ತ್ಯಾಜ್ಯದ ಅರಿವು ಮತ್ತು ವಿಲೇವಾರಿ ಬಗ್ಗೆ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜಿನ ಹಂತದಿಂದ ಜಾಗೃತಿ ಮೂಡಿಸಬೇಕು. ಇದರಿಂದ ಮುಂದಿನ ವರ್ಷಗಳಲ್ಲಿ ಉತ್ಪತ್ತಿ ಆಗಬಹುದಾದ ತ್ಯಾಜ್ಯ ತಡೆಗಟ್ಟಬಹುದು ಎಂದು ತಿಳಿಸಿದರು.

ವಿವಿಧ ಸಂಘ ಸಂಸ್ಥೆಗಳ ಸಹಕಾರ
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಡೂ ಮೈಂಡ್ಸ್‌ ಡಿಸೈನ್‌ ಲ್ಯಾಬ್‌, ಪರಿಸರ ಅಧ್ಯಯನ ಕೇಂದ್ರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಅಭಿಯಾನ ನಡೆಯಿತು. ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಸರ್ಜಿ ಫೌಂಡೇಷನ್‌, ಐ ಸೆವೆನ್‌, ರೇಡಿಯೋ ಶಿವಮೊಗ್ಗ, ಶಿವಮೊಗ್ಗ ಐಟಿ ಅಸೋಸಿಯೇಷನ್‌, ರಾಷ್ಟ್ರೀಯ ಶಿಕ್ಷಣ ಸಮಿತಿ, ನಡಿಗೆ ಶಿಕ್ಷಣ ಪ್ರತಿಷ್ಠಾನ, ರೋಟರಿ, ಜೆಸಿಐ ಹಾಗೂ ಇತರ ಸಂಸ್ಥೆಗಳು ಸಹಕಾರ ನೀಡಿದವು.

ರಾಷ್ಟ್ರೀಯ ಶಿಕ್ಷಣ ಸಮಿತಿಯ ಟಿ.ಆರ್. ಅಶ್ವಥನಾರಾಯಣ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ವಸಂತ ಹೋಬಳಿದಾರ್‌, ಸಹ ಕಾರ್ಯದರ್ಶಿ ಜಿ.ವಿಜಯ್ ಕುಮಾರ್‌, ಗಣೇಶ್ ಅಂಗಡಿ, ಪ್ರದೀಪ್ ಎಲಿ, ಐ ಸೆವೆನ್ ವೇಣುಗೋಪಾಲ್‌, ಜಿ.ವಿ.ರವೀಂದ್ರ, ಪ್ರಾದೇಶಿಕ ಪರಿಸರ ಅಧಿಕಾರಿ ಶಿಲ್ಪಾ, ಪಾಲಿಕೆ ಸದಸ್ಯ ಧೀರರಾಜ್ ಹೊನ್ನವಿಲೆ, ಪರಿಸರ ಅಧ್ಯಯನ ಕೇಂದ್ರ ನಿರ್ದೇಶಕ ಜನಾರ್ಧನ್, ಡೂ ಮೈಂಡ್ಸ್‌ ಡಿಸೈನ್‌ ಲ್ಯಾಬ್‌ ವೆಂಕಟೇಶ್, ನವೀನ್ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ATNCC CollegeChamber of CommerceDr. Dananjaya SarjiE-WasteKannada News WebsiteLatest News KannadaScientific disposalShimogaShivamoggaShivamogga Newsಇ-ತ್ಯಾಜ್ಯಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘವೈಜ್ಞಾನಿಕ ವಿಲೇವಾರಿಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೋನಿಯಾ, ರಾಹುಲ್’ಗೆ ಇಟಲಿಗೆ ಮರಳುವ ಸಮಯ ಬಂದಿದೆ: ನಳೀನ್ ಕುಮಾರ್ ಕಟೀಲ್ ಲೇವಡಿ

Next Post

ಗ್ರಾಹಕನಿಗೆ 500 ರೂ. ಹಿಂತಿರುಗಿಸದ ಈ ಬ್ಯಾಂಕ್’ಗೆ ಬರೋಬ್ಬರಿ 1 ಲಕ್ಷ ರೂ. ದಂಡ

kalpa News

kalpa News

Next Post
ಕ್ಲೇಂ ನಿರಾಕರಿಸಿದ್ದಕ್ಕೆ ದಂಡ ಸೇರಿ 1,31,216 ರೂ. ಪಾವತಿಸಲು ಎಲ್’ಐಸಿಗೆ ಗ್ರಾಹಕ ಆಯೋಗ ಸೂಚನೆ

ಗ್ರಾಹಕನಿಗೆ 500 ರೂ. ಹಿಂತಿರುಗಿಸದ ಈ ಬ್ಯಾಂಕ್'ಗೆ ಬರೋಬ್ಬರಿ 1 ಲಕ್ಷ ರೂ. ದಂಡ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL