ಕಲ್ಪ ಮೀಡಿಯಾ ಹೌಸ್ | ಸೊರಬ |
ಪುರಸಭೆಯ ನೂತನ ಅಧ್ಯಕ್ಷರಾಗಿ ಈರೇಶ್ ಮೇಸ್ತ್ರಿ ಆಯ್ಕೆಯಾಗಿದ್ದು, ಈ ಮೂಲಕ ಕಮಲ ಪಕ್ಷ ಮತ್ತೊಮ್ಮೆ ಅಧಿಕಾರ ಹಿಡಿದಿದೆ.
ನೂತನ ಅಧ್ಯಕ್ಷರ ಚುನಾವಣೆ ಇಂದು ನಡೆದಿದ್ದು, 12 ಸದಸ್ಯರನ್ನು ಹೊಂದಿರುವ ಪುರಸಭೆಗೆ ಈರೇಶ್ ಮೇಸ್ತ್ರಿ ಜೆಡಿಎಸ್ ಮತ್ತು ಪಕ್ಷೇತರ ಅಭ್ಯರ್ಥಿಗಳ ಬೆಂಬಲದೊಂದಿಗೆ ಒಟ್ಟು 8 ಮತಗಳನ್ನು ಪಡೆಯುವ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್‌ನಿಂದ ಸುಲ್ತಾನ ಬೇಗಂ ಮತ್ತು ಬಿಜೆಪಿಯಿಂದ ಈರೇಶ ಮೇಸ್ತ್ರಿ ನಾಮಪತ್ರ ಪತ್ರ ಸಲ್ಲಿಸಿದರು.
ಪುರಸಭೆಯ ಎಲ್ಲಾ ಸದಸ್ಯರು ಮತ ಚಲಾಯಿಸಿದ್ದು, ಕಾಂಗ್ರೆಸ್‌ನ ಸುಲ್ತಾನ ಬೇಗಂ ನಾಲ್ಕು ಮತಗಳು ಪಡೆದರು. ಚುನಾವಣಾಧಿಕಾರಿಯಾಗಿ ಸಾಗರ ಉಪವಿಭಾಗಾಧಿಕಾರಿ ಡಾ. ಎಲ್. ನಾಗರಾಜ್ ಕಾರ್ಯ ನಿರ್ವಹಿಸಿದರು.
ಪುರಸಭೆ ಅಧ್ಯಕ್ಷರಾಗಿದ್ದ ಎಂ.ಡಿ. ಉಮೇಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















