ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಇರಿಸುವುದು ಸೂಕ್ತವಲ್ಲ. ಬದಲಾಗಿ ನಾಡಿಗೆ ಕೊಡುಗೆ ನೀಡಿದ ಮಹನೀಯರಲ್ಲಿ ಒಬ್ಬರ ಹೆಸರನ್ನು ನಾಮಕರಣ ಮಾಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಪತ್ರ ಬರೆದಿದ್ದಾರೆ.
ಜಿಲ್ಲೆಯ ಬಹುವರ್ಷಗಳ ಕನಸಾಗಿರುವ ವಿಮಾನ ನಿಲ್ದಾಣ ಈಗ ನನಸಾಗುತ್ತಿದೆ. ನಿಲ್ದಾಣದ ಕಾಮಗಾರಿಯನ್ನು ತಾವು ಇತ್ತೀಚೆಗೆ ವೀಕ್ಷಿಸಿ, ತ್ವರಿತವಾಗಿ ಮುಕ್ತಾಯಗೊಳಿಸುವಂತೆ ಸೂಚಿಸಿರುವುಕ್ಕೆ ಸಿಎಂಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದಾಗ ನನ್ನದೊಂದು ಅಳಿಲು ಸೇವೆ ಮಾತ್ರ. ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾಭಾವ ನನ್ನದು. ಈ ಹಿನ್ನೆಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲ ಎಂದು ಭಾವಿಸುತ್ತೇವೆ ಎಂದಿದ್ದಾರೆ.
Discussion about this post