ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಇವರು ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣ ಕುರಿತಂತೆ ಮೆಗ್ಗಾನ್ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ನಿರ್ವಹಿಸುತ್ತಿರುವ ಮನೋಜ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.
ಇನ್ನು, ಇಂದು ನಡೆದ ಶಾಂತಿ ಸಭೆಯ ವೇಳೆ ಮಾತನಾಡಿರುವ ಜಿಲ್ಲಾಧಿಕಾರಿಗಳು ಅಪ್ರಾಪ್ತೆ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ತಪ್ಪಿತಸ್ಥರಿಗೆ ಪೋಕ್ಸೋ ಕಾಯ್ದೆಯಡಿ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದರು.
ಶಿವಮೊಗ್ಗ ನಗರದಲ್ಲಿ ಗಾಂಜಾ ಪ್ರಭಾವದಿಂದ ಹಲವಾರು ಅಪರಾಧ ಕೃತ್ಯಗಳು ಸಂಭವಿಸುತ್ತಿರುವ ಬಗ್ಗೆ ಹಲವಾರು ಮಂದಿ ಕಳವಳ ವ್ಯಕ್ತಪಡಿಸಿದ್ದು, ಇದನ್ನು ಕಟ್ಟುನಿಟ್ಟಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು. ಔಷಧಿಗಳನ್ನು ಉದ್ದೀಪನವಾಗಿ ಬಳಸುವುದನ್ನು ತಡೆಯುವ ನಿಟ್ಟಿನಲ್ಲಿ ಫಾರ್ಮಸಿಸ್ಟ್‌ಗಳ ಸಭೆಯನ್ನು ಆದಷ್ಟು ಬೇಗನೆ ಕರೆಯಲಾಗುವುದು. ವೈಯಕ್ತಿಕವಾಗಿ ನಡೆಯುವ ಘಟನೆಗಳನ್ನು ಸಾಮುದಾಯಿಕವಾಗಿ ನೋಡುವುದರಿಂದ ಪರಿಸ್ಥಿತಿ ಬಿಗಡಾಯಿಸಲು ಕಾರಣವಾಗುತ್ತದೆ. ಇದಕ್ಕೆ ಯಾರೂ ಆಸ್ಪದ ನೀಡಬಾರದು ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post