ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಎನ್’ಟಿಎಸ್’ಸಿ ಪರೀಕ್ಷೆ ಬರೆಯುವ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪಿಇಎಸ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಯಶಸ್ವಿಯಾಯಿತು.
ಪಿಇಎಸ್ ಟ್ರಸ್ಟ್ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ನಾಗರಾಜ್ ಮಾತನಾಡಿ, ಪಿಇಎಸ್ ಟ್ರಸ್ಟ್ ಅಡಿಯಲ್ಲಿ ನಡೆಯುತ್ತಿರುವ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಲಭ್ಯವಿರುವ ಕೋರ್ಸ್’ಗಳ ಬಗ್ಗೆ ಹಾಗೂ ಸೌಲಭ್ಯಗಳ ಬಗ್ಗೆ ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ಮಾತನಾಡಿ, ಈ ಹಿಂದಿನ ವರ್ಷಗಳಲ್ಲಿ ಎನ್’ಟಿಎಸ್’ಸಿ ಪರೀಕ್ಷೆಯ ತಾಲೂಕುವಾರು ಫಲಿತಾಂಶ ಅಷ್ಟೇನೂ ಸಮಾಧಾನಕರವಾಗಿಲ್ಲ. ಆದರೆ ಇಂತಹ ತರಬೇತಿ ಕಾರ್ಯಾಗಾರಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ಸಾಧ್ಯವಿದೆ ಎಂದು ಕಿವಿಮಾತು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ರಾಜ್ಯದ ಹೆಸರಾಂತ ಸ್ಪರ್ಧಾತ್ಮಕ ಪರೀಕ್ಷಾ ತರಬೇತುದಾರ ಶಿವಕುಮಾರ್ ಮಾತನಾಡಿ, ಎನ್’ಟಿಎಸ್’ಸಿ ಪರೀಕ್ಷೆ ಬರೆಯಲು ಬೇಕಾದ ಪೂರ್ವ ತಯಾರಿಯ ಬಗ್ಗೆ ವಿದ್ಯಾರ್ಥಿಗಳಿಗೆ ಸುಮಾರು 3 ಗಂಟೆಗಳ ಕಾಲ ತರಬೇತಿ ನೀಡಿರುತ್ತಾರೆ. ಈ ತರಬೇತಿ ಕಾರ್ಯಾಗಾರದಲ್ಲಿ ಶಿವಮೊಗ್ಗ ತಾಲೂಕಿನ ಸುಮಾರು 400 ಜನ ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿ ಅವಕಾಶದ ಸದುಪಯೋಗ ಮಾಡಿಕೊಂಡಿರುತ್ತಾರೆ ಎಂದರು.ಪಿಇಎಸ್ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್. ರಂಗನಾಥಯ್ಯ ಅವರು ಮಾತನಾಡಿ, ಎನ್’ಟಿಎಸ್’ಸಿ ಪರೀಕ್ಷೆಯ ಉದ್ದೇಶ ಹಾಗೂ ಈ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ಗಳಿಸುವ ಮೂಲಕ ವಿದ್ಯಾರ್ಥಿಯು ತನ್ನ ಶಿಕ್ಷಣದ ಎಲ್ಲಾ ಹಂತಗಳಲ್ಲೂ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾದ ಅವಕಾಶಗಳ ಬಗ್ಗೆ ವಿವರಿಸಿದರು. ಈ ನಿಟ್ಟಿನಲ್ಲಿ ಇಂತಹ ಕಾರ್ಯಾಗಾರಗಳ ಅಗತ್ಯವನ್ನು ಮನವರಿಕೆ ಮಾಡಿಕೊಟ್ಟರು.
ಉಪನ್ಯಾಸಕರಾದ ಕುಮಾರ್ ದಯಾನಿದಧಿ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ಕು.ಅನೂಷ ಸ್ವಾಗತಿಸಿದರು.ಶಿವಮೊಗ್ಗ ತಾಲೂಕು ಸಾರ್ವಜನಿಕ ಶಿಕ್ಷಣ ಇಲಾ ಸಹಯೋಗದಲ್ಲಿ ತರಬೇತಿ ನಡೆಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post