ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾಂಕ್ರಾಮಿಕ ರೋಗ ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಉಚಿತ ಟೈಪಾಯಿಡ್ ಲಸಿಕೆಯನ್ನು ಸರಕಾರಿ ಶಾಲೆ ಮಕ್ಕಳಿಗೆ ನೀಡಲಾಗುತ್ತಿದೆ ಎಂದು ಸರ್ಜಿ ಪೌಂಡೇಷನ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಧನಂಜಯ ಸರ್ಜಿ Dhananjaya Sarji ಹೇಳಿದರು.
ನಗರದ ಎಸ್‌ಪಿಎಂ ರಸ್ತೆಯ ಭೂಪಾಳ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ಜಿ ಪೌಂಡೇಷನ್, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರೌಂಡ್ ಟೇಬಲ್ ಇಂಡಿಯಾ ಶಾಖೆ ಶಿವಮೊಗ್ಗ ಘಟಕದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಬೆಳಗ್ಗೆ ಹಮ್ಮಿಕೊಂಡಿದ್ದ ಮಕ್ಕಳ ಆರೋಗ್ಯ ತಪಾಸಣೆ , ಉಚಿತ ಟೈಪಾಯಿಡ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಳೆಗಾಲ ಹಾಗೂ ನೆರೆ ಸಂದರ್ಭ ಸಾಂಕ್ರಾಮಿಕ ಕಾಯಿಲೆಗಳು ಕಾಣಿಸಿಕೊಳ್ಳುವುದು ಸಜಹ. ಈ ನಿಟ್ಟಿನಲ್ಲಿ ರೋಗಗಳ ತಡೆಗಟ್ಟಲು ಮುನ್ನೆಚ್ಚರಿಕೆ ಸಲುವಾಗಿ ಆರೋಗ್ಯ ತಪಾಸಣೆ, ಉಚಿತ ಲಸಿಕಾ ಕಾರ್ಯಕ್ರಮವನ್ನು ಸರಕಾರಿ ಶಾಲೆಗಳಲ್ಲಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗುತ್ತಿದೆ. ಈ ಕಾರ್ಯಕ್ರಮದಡಿ ಒಟ್ಟು 2 ಸಾವಿರ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಅದರ ಭಾಗವಾಗಿ ಇಂದು ಕಾರ್ಯಕ್ರಮ ನಡೆಸಲಾಯಿತು ಎಂದರು.

Also read: ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಸ್ಥಾನ
ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ರವಿ ಮಾತನಾಡಿ, ಸರ್ಜಿ ಆಸ್ಪತ್ರೆಗಳ ಸಮೂಹ ಛೇರ್ಮನ್ ಆದ ಡಾ.ಧನಂಜಯ ಸರ್ಜಿ ಅವರು ಸರಕಾರಿ ಶಾಲೆಯ ಬಡ ಮ್ಕಕಳಿಗೆ ಟೈಪಾಯಿಡ್ ಉಚಿತ ಲಸಿಕೆ ನೀಡುತ್ತಿರುವುದು ಶ್ಲಾಘನೀಯ ಎಂದರು.
ಈ ಸಂದರ್ಭ ಮಹಾನಗರ ಪಾಲಿಕೆ ಸದಸ್ಯೆ ಕಲ್ಪನಾ ರಮೇಶ್, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆಡಳಿತಾದಿಕಾರಿ ಕೆ.ಆರ್.ಪುರುಷೋತ್ತಮ್, ಶಾಲೆಯ ಮುಖ್ಯ ಶಿಕ್ಷಕಿ ಎಚ್. ಆರ್. ಸರಸ್ವತಿ, ಸಹ ಶಿಕ್ಷಕಿಯರಾದ ಜಯಶ್ರೀ, ದಾನಿಗಳಾದ ವಿಶ್ವೇಂದ್ರ ಭೂಪಾಳಂ, ಶಿವಣ್ಣ ಹಾಗೂ ಕೋಟೆ ಗೆಳೆಯರ ಬಳಗದ ಬಳಗದ ಎಚ್.ಎಸ್. ಧನಂಜಯ, ರಂಜಿತ್, ಪ್ರಶಾಂತ್ , ಸತೀಶ್, ರಾಮಚಂದ್ರಪ್ಪ ಮತ್ತು ಎಸ್‌ಡಿಎಂಸಿ ಸದಸ್ಯರು ಭಾಗವಹಿಸಿದ್ದರು. ಅಲ್ಲದೇ ಶಾಲಾ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಶ್ರಮಾಧಾನ ಮಾಡಲಾಯಿತು.

ಚಿತ್ರ ಮಾಹಿತಿ : ಡಾ.ಧನಂಜಯ ಸರ್ಜಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















