ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ನಿರಂತರವಾಗಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರು ಅಣೆಕಟ್ಟೆಯಿಂದ ತುಂಗಾ ನದಿಗೆ 74500 ಕ್ಯೂಸೆಕ್ಸ್ ನೀರನ್ನು ಹರಿಸಲಾಗುತ್ತಿದೆ.
ಈ ಕುರಿತಂತೆ ಡ್ಯಾಂನ ಅಧಿಕಾರಿಗಳು ಮಾಹಿತಿ ನೀಡಿದ್ದು, ಹಿನ್ನೀರು ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಪರಿಣಾಮವಾಗಿ ಅಣೆಕಟ್ಟೆಗೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ವೇಳೆಗೆ 74500 ಕ್ಯೂಸೆಕ್ಸ್ ನೀರನ್ನು ಹರಿಸಲು ನಿರ್ಧರಿಸಲಾಗಿದೆ. ಒಳಹರಿವು ಹೆಚ್ಚಾದಲ್ಲಿ ಹೊರಹರಿವನ್ನೂ ಸಹ ಏರಿಕೆ ಮಾಡಲಾಗುತ್ತದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post