ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ನಗರದಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆ ಬಹಳಷ್ಟು ಅವಾಂತರ ಸೃಷ್ಠಿಸಿದ್ದು, ಕೆಲವು ಬಡಾವಣೆಗಳಲ್ಲಿ ನೆರೆಯಂತಹ ಪರಿಸ್ಥಿತಿ ಸೃಷ್ಠಿಯಾಗಿತ್ತು.
ನಿನ್ನೆ ರಾತ್ರಿ ಸುರಿದ ಮಳೆಗೆ ಹೊಸಮನೆ ಬಡಾವಣೆಯ ರಾಜಕಾಲುವೆ ತುಂಬಿ ಸುಮಾರು ನೂರಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು ಸಣ್ಣ ಸಣ್ಣ ಮಕ್ಕಳು, ವಯೋವೃದ್ಧರು, ಬಾಣಂತಿಯರ ಪಾಡು ಹೇಳತೀರದಾಗಿದೆ.

ಈ ಭಾಗದ ಜನಜೀವನ ಅಸ್ತವ್ಯಸ್ತವಾಗಿದ್ದು ರಾತ್ರಿಯೆಲ್ಲಾ ಮನೆಯಲ್ಲಿ ನೀರು ನಿಂತಿದ್ದು ಗೃಹೋಪಯೋಗಿ ವಸ್ತುಗಳು ಹಾಳಾಗಿವೆ.
ರಾಜಕಾಲುವೆಯನ್ನು ಸರಿಪಡಿಸುವಂತೆ ಈಗಾಗಲೇ ಹಲವು ಬಾರಿ ಪಾಲಿಕೆ ಆಯುಕ್ತರಿಗೆ ಮನವಿ ಮಾಡಿದ್ದರೂ ಅವರ ಇದಕ್ಕೆ ಸ್ಪಂದಿಸಿಲ್ಲ. ಹೀಗಾಗಿ, ಇಂತಹ ಅವಘಡಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ.

ಇನ್ನು, ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಅವರು ನೀರು ತುಂಬಿದ ಮನೆಗಳನ್ನು ರಾತ್ರಿ 1.30 ರ ಸಮಯದಲ್ಲಿ ವೀಕ್ಷಿಸಿ ಅವರುಗಳಿಗೆ ಮಾನಸಿಕ ಸ್ಥೈರ್ಯವನ್ನು ತುಂಬಿದರು.
ಈ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆಸಿ ನಷ್ಟವಾದ ಕುಟುಂಬಗಳಿಗೆ ಪರಿಹಾರ ಪಾಲಿಕೆಯಿಂದಲೇ ಕೊಡಬೇಕೆಂದು ಹಾಗೂ ರಾಜಕಾಲುವೆಯನ್ನು ಕೂಡಲೇ ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















