ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಶೇಷಾದ್ರಿಪುರಂನಲ್ಲಿ ಮನೆಗಳು ಕುಸಿದಿದ್ದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶೇಷಾದ್ರಿಪುರಂನ 2ನೆಯ ತಿರುವಿನಲ್ಲಿ ಹಲವು ಮನೆಗಳು ಕುಸಿದಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರು, ಸಂತ್ರಸ್ತರಿಂದ ಮಾಹಿತಿ ಪಡೆದುಕೊಂಡರು.

ಈ ಸಂಬಂಧ ಪಾಲಿಕೆ ಹಾಗೂ ಜಿಲ್ಲಾಡಳಿತದ ವತಿಯಿಂದ ಆಗಬೇಕಿರುವ ಪರಿಹಾರ ಕಾರ್ಯಗಳನ್ನು ತಕ್ಷಣ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು, ತಹಸೀಲ್ದಾರ್ ಹಾಗೂ ಪಾಲಿಕೆ ಆಯುಕ್ತರನ್ನು ಅಗ್ರಹಿಸುವುದಾಗಿಯೂ ಭರವಸೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post