ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಾಜಿ ಪ್ರಧಾನಿ ಇಂದಿರಾಗಾಂಧಿಯವರ 103ನೆಯ ಜನ್ಮ ದಿನಾಚರಣೆಯನ್ನು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರು ಅರ್ಥಪೂರ್ಣವಾಗಿ ಆಚರಿಸಿದ್ದಾರೆ.
ಪ್ರಸನ್ನ ಕುಮಾರ್ ಹಾಗೂ ಅವರ ಅಭಿಮಾನಿಗಳು ಮಹಾವೀರ ಗೋಶಾಲೆಗೆ ತೆರಳಿ, ಗೋಮಾತೆಗೆ ಪೂಜೆ ಸಲ್ಲಿಸಿ, ಮೇವು ತಿನ್ನಿಸುವ ಮೂಲಕ ಇಂದಿರಾಗಾಂಧಿಯವರ ಜನ್ಮ ದಿನವನ್ನು ಆಚರಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ದೇಶ ಕಂಡ ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಕೊಡುಗೆ ಅಪಾರವಾದುದು. ಇಂತಹ ನಾಯಕಿಯ ಜನ್ಮ ದಿನವನ್ನು ಗೋವುಗಳೊಂದಿಗೆ ಆಚರಿಸುತ್ತಿರುವುದು ನಮಗೆ ಹೆಮ್ಮೆಯ ವಿಚಾರವಾಗಿದೆ ಎಂದರು.
ಪ್ರಮುಖರಾದ ದೀಪಕ್ ಸಿಂಗ್, ಎನ್. ರಮೇಶ್, ಯಮುನಾ ರಂಗೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















