ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂದಿನ ಕಾಲಘಟ್ಟದಲ್ಲಿ ಪರಿಸರ, ಜಲ, ಮಣ್ಣಿನ ಮಹತ್ವ ಅರಿಯುವುದು ಅತ್ಯಂತ ಅನಿವಾರ್ಯವಾಗಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಎನ್’ಎಸ್’ಎಸ್ ಸಂಯೋಜನಾಧಿಕಾರಿ ಡಾ. ನಾಗರಾಜ್ ಪರಿಸರ ಕರೆ ನೀಡಿದರು.
ಮಾನಸ ಟ್ರಸ್ಟ್ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ವತಿಯಿಂದ ರಾಮಮಗರಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಠಗೊಂಟನಕೊಪ್ಪ ಗ್ರಾಮದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಅವರು ಮಾತನಾಡಿದರು.
ಇಂದು ಪ್ರತಿಯೊಬ್ಬರು ಪರಿಸರ, ಜಲ ಹಾಗೂ ಮಣ್ಣು ಇದರ ಮಹತ್ವವನ್ನುಅರಿಯುವುದು ಅಗತ್ಯ ಮತ್ತು ಅನಿವಾರ್ಯವಾಗಿದೆ. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು. ಇನ್ನೂ ಮುಂದಿನ 7 ದಿನಗಳಲ್ಲಿ ಶಿಬಿರಾರ್ಥಿಗಳು ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಮತ್ತು ಪ್ಲಾಸ್ಟಿಕ್ ಮುಕ್ತ ಭಾರತದ ಬಗ್ಗೆ ನಾಟಕಗಳನ್ನು ಮಾಡಿ ಗ್ರಾಮದ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.
ಗ್ರಾಮ ಪಂಚಾಯ್ತಿ ಸದಸ್ಯ ಕೃಷ್ಣಪ್ಪ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಗ್ರಾಮೀಣ ಶಿಬಿರಗಳು ಗ್ರಾಮಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಹಳಷ್ಟು ವಿಷಯಗಳ ಅರಿವನ್ನು ಮೂಡಿಸುವ ವಿಶೇಷ ಕಾರ್ಯಕ್ರಮವಾಗಿದೆ. ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಪ್ರಪ್ರಥಮ ಶಿಬಿರವು ರಾಮನಗರದಲ್ಲಿ ನಡೆದಾಗ ಶಿಬಿರದಲ್ಲಿ ಹಲವು ಮಹತ್ವದ ವಿಷಯಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾಹಿತಿಯನ್ನು ನೀಡಿದ್ದು ಈಗಲೂ ತಮಗೆಲ್ಲ ಅನುಕೂಲವಾಗಿದೆ ಎಂದು ತಿಳಿಸಿದರು.
ಅಲ್ಲದೇ ಶಿಬಿರದಲ್ಲಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳ ಬಗ್ಗೆ ಒಂದು ಒಳ್ಳೆಯ ಬಾಂದವ್ಯ ಏರ್ಪಡುತ್ತದೆ. ಅದು ಬಹಳ ಮುಖ್ಯವಾದ ಸಾಮಾಜಿಕ ಶಿಕ್ಷಣ ಎಂದು ತಿಳಿಸಿದರು.
ಶಿಬಿರಾರ್ಥಿಗಳನ್ನು ಉದ್ದೇಶಿಸಿ ಊರಿನ ಅರ್ಚಕ ಶಿವಕುಮಾರ ಸ್ವಾಮಿಗಳು, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀ ರಾಮಚಂದ್ರರಾವ್ ಅವರು ಹಿತನುಡಿಗಳನ್ನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ಸಂಧ್ಯಾ ಕಾವೇರಿ, ಕಾಲೇಜಿನ ಎನ್’ಎಸ್’ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಸುಕೀರ್ತಿ, ಶ್ರೀ ರಾಬರ್ಟ್ ರಾಯಪ್ಪ, ರಾಮನಗರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಾಕಮ್ಮ, ಜಯಲಕ್ಷ್ಮೀ ಕೃಷ್ಣಪ್ಪ, ಶೇಕ್ ಮಹಮ್ಮದ್, ರಾಮಚಂದ್ರ ರಾವ್, ಶ್ರೀಮತಿ ಪೂರ್ಣಿಮಾ, ಶಿವಕುಮಾರ್ ಸ್ವಾಮಿ, ಹನುಮಂತಪ್ಪ ಉಪಸ್ಥಿತರಿದ್ದರು.
ಕಾಲೇಜಿನ ಬೋಧಕ ವರ್ಗ, ಶಿಬಿರಾರ್ಥಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಡಾ. ಸುಕೀರ್ತಿ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಬಿರಾರ್ಥಿಗಳು ಪ್ರಾರ್ಥಿಸಿ, ಮಧುಶ್ರೀ ನಿರೂಪಿಸಿದರು, ರಾಬರ್ಟ್ ರಾಯಪ್ಪ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post