ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಇಂದೇ ಬರೆದಿಟ್ಟುಕೊಳ್ಳಿ! ಶಿರಾ ಹಾಗೂ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿಯ ಗೆಲುವು ನಿಶ್ಚಿತ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮಧ್ಯಂತರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಂದು ಸ್ಥಾನವನ್ನೂ ಗೆಲ್ಲುವುದಿಲ್ಲ ಎಂದಿದ್ದರು. ಆದರೆ 15 ರಲ್ಲಿ 12 ಸ್ಥಾನವನ್ನು ನಾವೇ ಗೆದ್ದಿದ್ದೆವು. ಲೋಕಸಭಾ ಚುನಾವಣೆಯಲ್ಲೂ 10 ಸ್ಥಾನ ಗೆಲ್ಲಲು ಸಾಧ್ಯವಿಲ್ಲವೆಂದಿದ್ದರು, 25 ಸ್ಥಾನವನ್ನು ಗೆದ್ದು ತೋರಿಸಿದೆವು. ಇಂದೇ ಬರೆದಿಟ್ಟುಕೊಳ್ಳಿ ಶಿರಾ ಮತ್ತು ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿಯ ಗೆಲುವು ಖಚಿತ. ಚುನಾವಣೆ ಎಂದರೆ ಬಿಜೆಪಿ ಗೆಲುವು ಶತಸಿದ್ಧ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post