ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಮಂಗಳವಾರ ಪ್ರಕಟಿಸಿದ್ದು, ಏಪ್ರಿಲ್ 21ರಿಂದ ಮೇ 04ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಹಿನ್ನೆಲೆ ಯಲ್ಲಿ ಏಪ್ರಿಲ್ 21ರ ನಂತರ ನಡೆಯಬೇಕಿದ್ದ ಕುವೆಂಪು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ತಿಳಿಸಿದ್ದಾರೆ.ರಾಜ್ಯ ಸರ್ಕಾರದ ಮಾರ್ಗಸೂಚಿ ಹೊರಬಿದ್ದ ಬಳಿಕ ಮಾಹಿತಿ ನೀಡಿದ ಅವರು, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಕುವೆಂಪು ವಿವಿ ವ್ಯಾಪ್ತಿಯ ಕಾಲೇಜುಗಳು ಮತ್ತು ಸ್ನಾತಕೋತ್ತರ ವಿಭಾಗಗಳಲ್ಲಿ ನಿಗದಿಯಾಗಿದ್ದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳು, ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿದೆ. ನಾಳೆ ಬೆಳಿಗ್ಗೆ ಎಲ್ಲಾ ವಿಭಾಗಗಳು ಮತ್ತು ಕಾಲೇಜುಗಳಿಗೆ ಅಧಿಕೃತ ಆದೇಶ ರವಾನಿಸಲಾಗುವುದು ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post