ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ದೂರಶಿಕ್ಷಣದ ಸ್ನಾತಕೋತ್ತರ / ಸ್ನಾತಕ / ಪಿ.ಜಿ ಡಿಪ್ಲೊಮಾ / ಡಿಪ್ಲೊಮಾ ಮತ್ತು ಇತರೆ ಕೋರ್ಸುಗಳ ಅರ್ಜಿ ಮತ್ತು ಶುಲ್ಕ ಪಾವತಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ.
ಎರಡು ಪಟ್ಟು ಅವಧಿಯಲ್ಲಿ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಕೋರ್ಸ್ಗಳಿಗೆ ಹಾಲಿ ಚಾಲ್ತಿಯಲ್ಲಿರುವ ದಂಡ ಶುಲ್ಕ 3960 ರೂ.ಗಳನ್ನು ನಿಗದಿತ ಪರೀಕ್ಷಾ ಶುಲ್ಕದೊಂದಿಗೆ ಆನ್ಲೈನ್ನಲ್ಲಿ ಪಾವತಿಸಲು ಮಾರ್ಚ್-25 ಕೊನೆಯ ದಿನಾಂಕವಾಗಿತ್ತು. ಆದರೀಗ ಹಲವು ವಿದ್ಯಾರ್ಥಿಗಳು ನಿಗದಿತ ದಿನಾಂಕದೊಳಗೆ ಶುಲ್ಕ ಪಾವತಿಸಲು ಸಾಧ್ಯವಾಗದ ಕಾರಣ ಅವಧಿಯನ್ನು ವಿಸ್ತರಿಸಲು ಮನವಿ ಮಾಡಿರುವ ಹಿನ್ನಲೆಯಲ್ಲಿ ಏಪ್ರಿಲ್-18 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದ್ದು, ನಂತರ ಅವಧಿಯನ್ನು ವಿಸ್ತರಿಸಲಾಗುವುದಿಲ್ಲ ಎಂದು ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಉಪಕುಲಸಚಿವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post