ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರು ಹಾಸ್ಟೆಲ್ ನ ಸಮಸ್ಯೆ ಕುರಿತು ಸೋಮವಾರ ದಿಢೀರ್ ಪ್ರತಿಭಟನೆ ಕೈಗೊಂಡು ವಿಶ್ವವಿದ್ಯಾಲಯ ತತಕ್ಷಣವೇ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಕುಲಸಚಿವೆ ಜಿ. ಅನುರಾಧ ಅವರು ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ ಅವರ ಕುಂದು ಕೊರತೆಗಳನ್ನು ಆಲಿಸಿದರು. ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸಿದ ಕುಲಸಚಿವರು, ಆಹಾರದ ಗುಣಮಟ್ಟ ಕಾಯ್ದುಕೊಳ್ಳುವುದು, ಹಾಸ್ಟೆಲ್’ನ ಶುಚಿತ್ವ ಕಾಪಾಡುವುದು, ಮತ್ತಿತರ ಸಣ್ಣ ಪುಟ್ಟ ಸಮಸ್ಯೆಗಳಿಗೆ ಸಮಿತಿಯ ಮೂಲಕ ತತಕ್ಷಣವೇ ಪರಿಹಾರ ಒದಗಿಸಲಾಗುವುದು ಎಂದರು. ಪ್ರತ್ಯೇಕ ಆಹಾರನಿಲಯದ ಕಟ್ಟಡ ನಿರ್ಮಾಣದಂತಹ ಬೇಡಿಕೆಗಳಿದ್ದರೆ ವಿಶ್ವವಿದ್ಯಾಲಯಕ್ಕೆ ವರದಿ ಸಲ್ಲಿಸಲು ಪ್ರಾಂಶುಪಾಲರಿಗೆ ಸೂಚನೆ ನೀಡಿದರು.
ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಡಾ.ವಾಗ್ದೇವಿ, ಡಾ. ವೀಣಾ, ಡಾ. ರಮೇಶ್ ಬಾಬು, ಡಾ. ರಾಜೇಶ್ವರಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post