ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬೈಕ್’ಗೆ ಡಿಕ್ಕಿ ಹೊಡೆದ ಲಾರಿಯೊಂದು ಹಿಂಬದಿ ಕುಳಿತಿದ್ದ ಮಹಿಳೆಯ ಮೇಲೆ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಇಲ್ಲಿನ ಯಮಹ ಶೋರೂಂ ಬಳಿಯಲ್ಲಿ ಘಟನೆ ನಡೆದಿದ್ದು, ದಂಪತಿ ಬೈಕ್’ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ಕೆಳಕ್ಕೆ ಬಿದ್ದ ಮಹಿಳೆಯ ಮೇಲೆ ಅದೇ ಲಾರಿ ಹರಿದಿದ್ದು, ಪರಿಣಾಮವಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ.









Discussion about this post