ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎಲ್ಲರ ಸಮಸ್ಯೆಗೆ ಸ್ಪಂದಿಸುವ ಒಂದು ಸಹಕಾರಿ ಕಚೇರಿಯಾಗಿ ನನ್ನ ಕಚೇರಿ ಕಾರ್ಯ ನಿರ್ವಹಿಸಲಿದೆ ಎಂದು ವಿಧಾನ ಪರಿಷತ್ ಡಿ.ಎಸ್. ಅರುಣ್ ಭರವಸೆ ನೀಡಿದ್ದಾರೆ.
Also Read: ಡ್ರಗ್ಸ್ ಪ್ರಕರಣ: ಶಾರುಖ್ ಪುತ್ರ ಆರ್ಯನ್’ಗೆ ಕ್ಲೀನ್ ಚಿಟ್
ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿರುವ 100 ವರ್ಷಕ್ಕಿಂತಲೂ ಹಳೆಯದಾದ ಕಟ್ಟಡದಲ್ಲಿ ತಮ್ಮ ಜನ ಸಂಪರ್ಕ ಕಚೇರಿ ಉದ್ಘಾಟನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸ್ಥಳೀಯ ಸಂಸ್ಥೆಗಳಿಂದ ಚುನಾಯಿತ ಪ್ರತಿನಿಧಿಗಳ ಮೂಲಕ ಆಯ್ಕೆಯಾದ ನಾನು ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪಂಚಾಯಿತಿಗಳ ಸದಸ್ಯರ ಅಹವಾಲುಗಳನ್ನು ಆಲಿಸಿ ಅವರಿಗೆ ಸ್ಪಂದಿಸಲು ವಿಡಿಯೋ ಕಾನ್ಫರೆನ್ಸ್ ಮೂಲಕ ಡಿಜಿಟಲೈಸ್ಡ್ ಕಚೇರಿಯನ್ನಾಗಿ ಮಾಡಿದ್ದೇನೆ ಎಂದರು.
ಇಂದು ವಿದ್ಯುಕ್ತವಾಗಿ ಪಕ್ಷದ ನಾಯಕರು ಉದ್ಘಾಟಿಸಿದ್ದಾರೆ. ಈ ಸಂಪರ್ಕ ಕೇಂದ್ರ ಪ್ರತಿಯೊಬ್ಬರಿಗೂ ಹತ್ತಿರವಾಗಲಿದೆ. ಸಮಸ್ಯೆಗಳಿಗೆ ಸ್ಪಂದಿಸುವ ಕಚೇರಿಯಾಗಲಿದೆ. ನಾನಂತೂ ಒಬ್ಬ ರಾಜಕಾರಣಿಯಾಗಿ 24 ಗಂಟೆ ದೂರವಾಣಿಯನ್ನು ಬಂದ್ ಮಾಡದೇ ಸೇವೆ ನೀಡಲು ಸಿದ್ಧವಾಗಿದ್ದೇನೆ ಎಂದರು.

Also Read: ಮೇ 29ರಂದು ಶಿವಮೊಗ್ಗದಲ್ಲಿ ಎಎಪಿ ವಲಯ ಸಮಾವೇಶ: ರವಿಕುಮಾರ್ ಮಾಹಿತಿ
ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಕೆ.ಎಸ್. ಈಶ್ವರಪ್ಪ, ಕೆ.ಬಿ. ಅಶೋಕ್ ನಾಯ್ಕ್, ಆರ್.ಎಸ್.ಎಸ್. ಮುಖಂಡ ಪಟ್ಟಾಭಿರಾಂ, ಪದ್ಮನಾಭ್ ಭಟ್, ಮೇಯರ್ ಸುನಿತಾ ಅಣ್ಣಪ್ಪ ಹಾಗೂ ಪಕ್ಷದ ಹಿರಿಯ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post