ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನ ಕುಮಾರ್ ಅವರ ಪುತ್ರ ಸುಹಾಸ್ ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಇಂದು ಮುಂಜಾನೆ ಏಕಾಏಕಿ ಅಸ್ವಸ್ಥಗೊಂಡ ಸುಹಾಸ್(31) ಅವರನ್ನು ನಂಜಪ್ಪ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತು. ಆದರೆ, ಆ ವೇಳೆಗಾಗಲೇ ಅವರು ಹೃದಯಾಘಾದಿಂದ ಕೊನೆಯುಸಿರೆಳೆದಿದ್ದರು ಎಂದು ಅವರ ಆಪ್ತ ವಲಯ ಮಾಹಿತಿ ನೀಡಿದೆ.
ವಿಷಯ ತಿಳಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರಾದ ಮಂಜುನಾಥ ಭಂಡಾರಿ, ಪಕ್ಷದ ವಕ್ತಾರ ಕೆ.ಬಿ. ಪ್ರಸನ್ನಕುಮಾರ್, ಅಧ್ಯಕ್ಷ ಸುಂದರೇಶ್, ಮುಖಂಡರಾದ ಕೆ. ರಂಗನಾಥ್, ಗಿರೀಶ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಪ್ರಸನ್ನ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಸುಹಾಸ್ ಅವರ ಅಂತಿಮ ದರ್ಶನ ಪಡೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















