ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋ ಶುಗರ್ ಹಾಗೂ ಗ್ರೋತ್ ಆರ್ಗನ್ ಸಮಸ್ಯೆಯಿಂದ ಬಳಲುತ್ತಿದ್ದ 5 ವರ್ಷದ ಬಾಲಕನಿಗೆ ನಿರಂತರ ಚಿಕಿತ್ಸೆಗೆ ವ್ಯವಸ್ಥೆ ಮಾಡುವ ಮೂಲಕ ಸಂಸದ ಬಿ.ವೈ. ರಾಘವೇಂದ್ರ ಮಾನವೀಯತೆ ಮೆರೆದಿದ್ದಾರೆ.
ತಾಲೂಕಿನ ಇಟ್ಟಿಗೆ ಹಳ್ಳಿ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರಾಘವೇಂದ್ರ ಹಾಗೂ ಅಶ್ವಿನಿ ದಂಪತಿಗಳಿಗೆ ಇಬ್ಬರು ಮಕ್ಕಳು. ಮೊದಲನೆಯವನು ಎಲ್ಲರಂತೆಯೇ ಇದ್ದರೂ ಎರಡನೆಯ ಮಗು ಶ್ರೇಯಸ್’ಗೆ 6 ತಿಂಗಳಿನಿಂದಲೇ ವಿಚಿತ್ರ ಸಮಸ್ಯೆ ಕಾಣಿಸಿಕೊಂಡಿತ್ತು. ಲೋ ಶುಗರ್’ನಿಂದಾಗಿ ಬಳಲುತ್ತಿದ್ದ. ಜೊತೆಗೆ ಗ್ರೋತ್ ಆರ್ಗನ್ ಸಮಸ್ಯೆ ಕೂಡ ಕಾಣಿಸಿಕೊಂಡಿತ್ತು. ಇದು ಮಗುವಿನ ಬೆಳವಣಿಗೆ ಕುಂಠಿತಗೊಳಿಸುತ್ತಿದ್ದಲ್ಲದೆ, ಪ್ರಾಣಾಪಾಯವೂ ಇತ್ತು.

ಸಮಸ್ಯೆಯನ್ನು ಅರಿತುಕೊಂಡ ಸಂಸದರು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಮಗುವಿಗೆ 18 ವರ್ಷವಾಗುವವರೆಗೂ ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸಲು ಕ್ರಮ ಕೈಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತಮ್ಮಡಿಹಳ್ಳಿ ನಾಗರಾಜ್, ಬಿಜೆಪಿ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ ಇಟ್ಟಿಗೆಹಳ್ಳಿ ನಾಗೇಂದ್ರ, ಪ್ರಮುಖರಾದ ಸತೀಶ್, ಚೇತನ್ ಮತ್ತಿತರರಿದ್ದರು.
ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಕೃತಜ್ಞತೆ ಸಲ್ಲಿಸಿರುವ ಮಗುವಿನ ಪೋಷಕರಾದ ರಾಘವೇಂದ್ರ ಹಾಗೂ ಅಶ್ವಿನಿ ದಂಪತಿಗಳು ಸಂಕಷ್ಟದ ಸಂದರ್ಭದಲ್ಲಿ ಸ್ಪಂದಿಸಿ, ಮಗುವಿಗೆ ಚಿಕಿತ್ಸೆ ವ್ಯವಸ್ಥೆ ಮಾಡಿಸುವ ಮೂಲಕ ತಮ್ಮ ಬದುಕಲ್ಲಿ ಭರವಸೆ ಮೂಡಿಸಿದ್ದಾರೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post