ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಬಾಕಿ ಉಳಿದಿರುವ ನಗರದ ರಿಂಗ್ ರಸ್ತೆ ಅಭಿವೃದ್ಧಿ ಪೂರ್ಣಗೊಳಿಸಲು ಕೇಂದ್ರದಿಂದ ಅನುದಾನು ನೀಡುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಮನವಿ ಮಾಡಿದ್ದಾರೆ.
ಈ ಕುರಿತಂತೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿ, ಮಾತನಾಡಿದ ಅವರು, ಶಿವಮೊಗ್ಗ ನಗರಕ್ಕೆ ಅಗತ್ಯವಿರುವ ಹೊರವರ್ತುಲ ರಸ್ತೆಯ 15 ಕಿಲೋಮೀಟರ್ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರಾಧಿಕಾರದಿಂದ ಹಾಗೂ ನಾಲ್ಕು ಕಿಲೋಮೀಟರ್ ರಸ್ತೆ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಶಿವಮೊಗ್ಗ ವಿಭಾಗದಿಂದ ಬೈಪಾಸ್ ರಸ್ತೆಯನ್ನಾಗಿ ಆರಂಭಿಸಲು ಕ್ರಮ ವಹಿಸಲಾಗಿದೆ. ಬಾಕಿ ಉಳಿದ ಹೊರವರ್ತುಲ ರಸ್ತೆಯ 15 ಕಿಲೋಮೀಟರ್ ಉದ್ದದ ಭಾಗವನ್ನು ನಿರ್ಮಾಣ ಮಾಡಲು ಭೂಸ್ವಾದೀನ ವೆಚ್ಚದ ಶೇಕಡ 50ರಷ್ಟು ರಾಜ್ಯ ಸರ್ಕಾರ ನೀಡಿರುವುದರ ಬಗ್ಗೆ ತಿಳಿಸಿ, ಬಾಕಿ ಉಳಿದ ಭೂಸ್ವಾಧೀನದ ಅನುದಾನವನ್ನು ಕೇಂದ್ರ ಭೂಸಾರಿಗೆ ಮಂತ್ರಾಲಯದಿಂದ ದೊರಕಿಸಿಕೊಟ್ಟು ಕಾಮಗಾರಿಗೆ ಅಗತ್ಯವಿರುವ ಜೋಡಣೆ ನಕ್ಷೆಗೆ ತಕ್ಷಣ ಅನುಮೋದನೆ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು.
ಇನ್ನು, ತುಮಕೂರಿನಿಂದ ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರ ನಾಲ್ಕನೆಯ ಪ್ಯಾಕೇಜ್ ಕಾಮಗಾರಿಯಾದ ಬೆಟ್ಟದಹಳ್ಳಿ ಇಂದ ಶಿವಮೊಗ್ಗವರೆಗಿನ 4 ಪಥದ ರಸ್ತೆ ನಿರ್ಮಾಣ ಕಾಮಗಾರಿಯ ಭೂಸ್ವಾಧೀನಕ್ಕೆ ಅಗತ್ಯವಿರುವ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು. ಈ ಕಾಮಗಾರಿಗೆ ಸಂಬಂಧಿಸಿದ ಪರಿಷ್ಕೃತ ಅಂದಾಜಿಗೆ ಮಂಜೂರಾತಿಯನ್ನು ದೊರಕಿಸಿಕೊಟ್ಟು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ತಕ್ಷಣ ಕಾಮಗಾರಿಯನ್ನು ಪ್ರಾರಂಭಿಸಲು ನಿರ್ದೇಶನ ನೀಡುವಂತೆ ಕೋರಿದ್ದಾರೆ.
ಈ ಸಂದರ್ಭದಲ್ಲಿ ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ಪೀರ್ ಪಾಷಾರವರು ಸಹ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post