ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಹಳೇನಗರ ವ್ಯಾಪ್ತಿಯಲ್ಲಿ ಅ.8ರ ಗುರುವಾರ ನೀರು ಸರಬರಾಜು ಇರುವುದಿಲ್ಲ ಎಂದು ನಗರಸಭೆ ತಿಳಿಸಿದೆ.
ಈ ಕುರಿತಂತೆ ನಗರಸಭೆ ಆಯುಕ್ತ ಮನೋಹರ್ ಪ್ರಕಟಣೆ ಹೊರಡಿಸಿದ್ದು, ಹಳೇನಗರ ನೀರು ಶುದ್ಧಿಕರಣ ಘಟಕದಲ್ಲಿ ಅಮೃತ್ ಯೋಜನೆ ಅಡಿಯಲ್ಲಿ ಹೊಸದಾಗಿ ಪಂಪಿಂಗ್ ಮೆಷನರಿಯನ್ನು ಅಳವಡಿಸುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಹಳೇನಗರ ಭಾಗದಲ್ಲಿ ಅಂದು ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಕೋರಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post