ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದ್ದನ್ನು ವಿರೋಧಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಎನ್’ಎಸ್’ಯುಐ ಕಾರ್ಯಕರ್ತರನ್ನು ಬಂಧಿಸಲಾಗಿದೆ.
ಡಿಕೆಶಿ ಅವರ ನಿವಾಸದ ಮೇಲೆ ಇಂದು ಮುಂಜಾನೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಅವರ ನಿವಾಸದಿಂದ 50 ಲಕ್ಷ ರೂ. ದಾಖಲೆಯಿಲ್ಲದ ಹಣವನ್ನೂ ಸಹ ವಶಕ್ಕೆ ಪಡೆಯಲಾಗಿದೆ.
ರಾಜ್ಯದಲ್ಲಿ ಎರಡು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲಾಗದೇ ಸಿಬಿಐ ಮುಖಾಂತರ ರಾಜ್ಯ ಸರ್ಕಾರ ಶಿವಕುಮಾರ್ ಅವರ ಮೇಲೆ ದಾಳಿ ನಡೆಸಿದೆ ಎಂದು ಆರೋಪಿಸಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು.
ವಿನೋಬನಗರದಲ್ಲಿರುವ ಯಡಿಯೂರಪ್ಪ ಅವರ ನಿವಾಸದ ಸುತ್ತಲೂ ಬ್ಯಾರಿಕೇಟ್ ಹಾಕಿ, ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. ಮಧ್ಯಾಹ್ನದ ವೇಳೆಗೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಎನ್’ಎಸ್’ಯುಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದೊಯ್ದರು. ಸ್ಥಳದಲ್ಲಿ ಕೆಲವು ಕಾಲ ಬಿಗುವಿನ ವಾತಾವರಣ ಸೃಷ್ಠಿಯಾಗಿತ್ತು. ಸದ್ಯ ಸಿಎಂ ನಿವಾಸಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post