ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೊರೋನಾದಿಂದ ಸ್ಥಗಿತಗೊಂಡಿದ್ದ ಬಾಕಿ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಪಾಲಿಕೆ ಪ್ರತಿಪಕ್ಷ ನಾಯಕ ಎಚ್.ಸಿ. ಯೋಗೇಶ್ ಭರವಸೆ ನೀಡಿದರು.
ಶಹದ್ ನಗರದಲ್ಲಿ ರಸ್ತೆ ಹಾಗೂ ಚರಂಡಿ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯ ನೆರವೇರಿಸಿ ಅವರು ಮಾತನಾಡಿದರು.
ಕೊರೋನಾ ಮಹಾಮಾರಿಯಿಂದಾಗಿ ಈ ಭಾಗದ ಅನೇಕ ಕಾಮಗಾರಿಗಳು ಸ್ಥಗಿತಗೊಂಡಿದ್ದವು. ಮಳೆಗಾಲದ ಸಂದರ್ಭದಲ್ಲಿ ಈ ಭಾಗದ ರಸ್ತೆಗಳಲ್ಲಿ ಸಂಚಾರ ಮಾಡುವುದೇ ಬಹಳ ಕಷ್ಟಕರವಾಗಿತ್ತು. ಇದನ್ನೆಲ್ಲಾ ಸಹಿಸಿಕೊಂಡು ಸಾರ್ವಜನಿಕರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಾ ಈ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ನಾಲ್ಕನೆಯ ವಾರ್ಡಿನ ಕಾಂಗ್ರೆಸ್ ಅಧ್ಯಕ್ಷರಾದ ಮಹದೇವ್, ಆಶಿಕ್ ಬಾಬು, ಆನ್ಸರ್, ಅಫ್ತಬ್, ನ್ಯಾಮತ್, ಕಮಲಾ, ನಳಿನಾ, ಸೀಮಾ, ಎಸ್.ಕೆ. ಶರತ್, ಇರ್ಶಾದ್, ಹಸನ್ , ಮೊಯಿನ್ ಖಾನ್, ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post