ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ತಾನು ಕೆಲಸ ಮಾಡುತ್ತಿದ್ದ ಮಾಲೀಕರ ಮನೆಯಲ್ಲಿಯೇ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಆರೋಪಿಯಲ್ಲಿ ಬಂಧಿಸುವಲ್ಲಿ ಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ತಿರುಪಳಯ್ಯನಕೇರಿಯಲ್ಲಿನ ಚಿನ್ನ-ಬೆಳ್ಳಿ ತಯಾರು ಮಾಡಿ ಮಾರಾಟ ಮಾಡುವ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು, ಅವರ ಮನೆಯಲ್ಲಿ ವಾಸವಿದ್ದ ಪಶ್ಚಿಮ ಬಂಗಾಳ ಮೂಲದ ಅಬ್ದುಲ್ ದಿಲಾವರ್ ಮಲ್ಲಿಕ್ ಎಂಬ ವ್ಯಕ್ತಿಯು, ನ.11ರಂದು ಬಂಗಾರ ಕಳ್ಳತನ ಮಾಡಿರುವ ಬಗ್ಗೆ ದೂರು ದಾಖಲಾಗಿತ್ತು.

ಪ್ರಕರಣದ ಆರೋಪಿ ಹಾಗೂ ಮಾಲು ಪತ್ತೆಗಾಗಿ ಶಿವಮೊಗ್ಗ ಡಿವೈಎಸ್’ಪಿ ಉಮೇಶ್ ಈಶ್ವರ್ ನಾಯಕ್ ಮಾರ್ಗದರ್ಶನದಲ್ಲಿ, ಕೋಟೆ ಠಾಣೆ ಸಿಪಿಐ ಚಂದ್ರಶೇಖರ್ ನೇತೃತ್ವದಲ್ಲಿ, ಪಿಎಸ್’ಐ ಶಿವಾನಂದ ಕೋಳಿ, ಸಿಬ್ಬಂದಿಗಳಾದ ಸಿಎಚ್’ಸಿ ಅಶೋಕ್, ಕಲ್ಲನಗೌಡ, ಸಿ.ಪಿ.ಸಿ ಅಂಡ್ರೋನ್ ಜೋನ್ಸ್’ ಅವರುಗಳನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ, ಆರೋಪಿ ಪಶ್ಚಿಮ ಬಂಗಾಳದ ಹೂಗ್ಲಿ ವಾಸಿ ಅಬ್ದುಲ್ ದಿಲಾವರ್ ಮಲ್ಲಿಕ್ ಹುಸೇನ್(31) ಎನ್ನುವವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಆರೋಪಿಯಿಂದ 3,47,000 ರೂ.ಮೌಲ್ಯದ 72 ಗ್ರಾಂ ತೂಕದ ಚಿನ್ನಾಭರಣವನ್ನು ವಶಕ್ಕೆ ಪಡೆದು, ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ ಎಂದು ಎಸ್’ಪಿ ಕೆ.ಎಂ. ಶಾಂತರಾಜು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















