ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ನಿವೇಶನ ಹೊಂದಿಲ್ಲದ ಬಡ ಹಾಗೂ ಮಧ್ಯಮ ವರ್ಗದ ಜನರಿಗಾಗಿ ಸಿಂಗಲ್ ಬೆಡ್ ರೂಂನ ಅಪಾರ್ಟ್‌ಮೆಂಟ್ ನಿರ್ಮಿಸುವ ಯೋಜನೆಯಿದೆ ಎಂದು ಸ್ಬೂಡಾ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್ ಹೇಳಿದ್ದಾರೆ.
ಪ್ರೆಸ್ ಟ್ರಸ್ಟ್ ಸಂವಾದದಲ್ಲಿ ಮಾತನಾಡಿದ ಅವರು, ಸಣ್ಣಪುಟ್ಟ ಅಂಗಡಿಗಳಲ್ಲಿ ಕೆಲಸ ಮಾಡುವವರು ಸೇರಿದಂತೆ ಬಡ ಹಾಗೂ ಮಧ್ಯಮ ವರ್ಗದ ಬಹಳಷ್ಟು ಮಂದಿಗೆ ನಿವೇಶನ ಇಲ್ಲ. ಈ ಹಿನ್ನೆಲೆಯಲ್ಲಿ ಸಿಂಗಲ್ ಬೆಡ್ ರೂಂ ಹೊಂದಿರುವ ಒಂದು ಸಾವಿರ ಮನೆಗಳ ಅಪಾರ್ಟ್‌ಮೆಂಟನ್ನು ಸೋಮಿನಕೊಪ್ಪದಲ್ಲಿ ನಿರ್ಮಿಸುವ ಯೋಜನೆಯಿದೆ. ಅಲ್ಲದೇ ಊರಗಡೂರಿನಲ್ಲಿ 62 ಎಕರೆ ನಿವೇಶನವನ್ನೂ ಸಹ ರಚಿಸಲಾಗಿದೆ ಎಂದರು.
ಪ್ರಸ್ತುತ ನಗರ ವ್ಯಾಪ್ತಿಯಲ್ಲಿ 180 ಉದ್ಯಾನವನಗಳಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಸ್ಬೂಡಾದಿಂದ ಅಭಿವೃದ್ಧಿಪಡಿಸಲಾಗುವುದು. ಮಹಾನಗರಗಳಂತೆ ಉದ್ಯಾನವನಗಳಲ್ಲಿ ಓಪನ್ ಜಿಮ್ ಆರಂಭಿಸಲು ಯೋಜಿಸಲಾಗಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post