ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಉಪವಿಭಾಗದ ಡಿವೈಎಸ್’ಪಿ ಆಗಿ ಹಿರಿಯ ಪೊಲೀಸ್ ಅಧಿಕಾರಿ ಕೆ. ಕೃಷ್ಣಮೂರ್ತಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಉಂಬ್ಳೆಬೈಲ್ ರಸ್ತೆಯಲ್ಲಿರುವ ಡಿವೈಎಸ್’ಪಿ ಕಚೇರಿಯಲ್ಲಿ ಇಂದು ಸಂಜೆ ಅಧಿಕಾರ ಸ್ವೀಕರಿಸಿದ್ದು, ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆಯನ್ನು ಬಲಪಡಿಸುವ ಕುರಿತು ಮಾತನಾಡಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿ ಕೃಷ್ಣಮೂರ್ತಿಯವರು, ಶಿವಮೊಗ್ಗದ ದೊಡ್ಡ ಪೇಟೆ ಪೋಲಿಸ್ ಠಾಣೆಯ ಪಿಎಸ್‌ಐ, ಸಾಗರ ನಗರ ಠಾಣೆಯಲ್ಲಿ ಸಿಪಿಐ, ಗುಪ್ತಚರ ಇಲಾಖೆಯಲ್ಲಿ, ಚಿಕ್ಕಮಗಳೂರಿನಲ್ಲಿ ಎಸಿಬಿ ನಿರೀಕ್ಷಕರಾಗಿ ಸೇವೆಸಲ್ಲಿಸಿರುವ ಅನುಭವ ಹೊಂದಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೆಂಗಾವಲು ಪಡೆಯಲ್ಲಿಯೂ ಇದ್ದರು.
ಈಗ ಭದ್ರಾವತಿ ಕಾನೂನು ಸುವ್ಯವಸ್ಥೆ ಉಪವಿಭಾಗದ ಡಿವೈಎಸ್’ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post