ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಬಿಳಕಿ ಗ್ರಾಮದಲ್ಲಿ ಬಿಜೆಪಿ ರಾಜ್ಯ ಯುವಮೋರ್ಚಾ ಉಪಾಧ್ಯಕ್ಷ ಎನ್.ವಿ. ಹರ್ಷಿತ್ ಅವರು ಮತಯಾಚನೆ ಮಾಡಿದರು.
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಸಾಧನೆಗಳನ್ನು, ರೈತಪರ ಕೇಂದ್ರ ಸರ್ಕಾರದ ಯೋಜನೆಗಳನ್ನು ಹಾಗೂ ಗ್ರಾಮೀಣಾಭಿವೃದ್ಧಿಗಾಗಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಕೈಗೊಂಡಿರುವ ವಿವಿಧ ಯೋಜನೆಗಳನ್ನು ಮತದಾರರ ಮುಂದಿಟ್ಟು ಅಭ್ಯರ್ಥಿಗಳ ಪರ ಮತಯಾಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಗಣೇಶ್ ಬಿಳಕಿ ಸೇರಿದಂತೆ ಯುವ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು, ಗ್ರಾಮಸ್ಥರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















