ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಿಎಚ್ ರಸ್ತೆಯ ನಿದಿಗೆ ಬಳಿ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಉರುಳಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ.
ಈ ಬಸ್ ಬೆಂಗಳೂರಿನಿಂದ ಸಿಗಂದೂರಿಗೆ ಹೊರಟಿತ್ತು ಎಂದು ಹೇಳಲಾಗಿದ್ದು, ಅತಿ ವೇಗದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ.

ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿ ಇರುವ ಕಾರಣ ಒಂದು ಬದಿಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಈ ವೇಳೆ ವೇಗವಾಗಿ ಬಂದ ಬಸ್ ನಿಯಂತ್ರಣ ತಪ್ಪಿ ಉರುಳಿದೆ.
ಬಸ್ ನಲ್ಲಿ ಸುಮಾರು 45 ಮಂದಿ ಇದ್ದರು ಎನ್ನಲಾಗಿದ್ದು ಯಾವುದೇ ಸಾವು ನೋವು ಸಂಭವಿಸಿಲ್ಲ. ಎಲ್ಲರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















