ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಅತ್ಯಾಚಾರದಂತಹ ಹೀನ ಕೃತ್ಯ ಎಸಗಿರುವ ದುರುಳರಿಗೆ ಅತಿ ಕಠಿಣ ಶಿಕ್ಷೆ ನೀಡಬೇಕು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ.
ಈ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ನಂತರ ಮಾತನಾಡಿದ ಎಬಿವಿಪಿ ಕಾರ್ಯಕರ್ತರು, ನಾಗರಿಕ ಸಮಾಜಕ್ಕೆ ಕಂಟಕ ಪ್ರಾಯವಾಗಿರುವ ಇಂತಹ ದುರುಳರನ್ನು ಮಟ್ಟಹಾಕಬೇಕು ಎಂದು ಆಗ್ರಹಿಸಿದರು.
ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತನ್ನ ತಾಯಿಯನ್ನು ನೋಡಿಕೊಳ್ಳುತ್ತಿದ್ದ ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ನಾಲ್ವರು ಅತ್ಯಾಚಾರ ಎಸಗಿದ್ದಾರೆ. ಇದೊಂದು ನಾಗರಿಕ ಸಮಾಜ ತಲೆತಗ್ಗಿಸುವಂತಹ ಕೆಲಸವಾಗಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post