ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್-19ರ ಸಂದಿಗ್ಧ ಸಂದರ್ಭದ ಪ್ರಸ್ತುತ ದಿನಗಳಲ್ಲಿ ಜಿಲ್ಲೆಯ ವಿವಿಧ ರೈಲ್ವೆ ಯೋಜನೆಗಳು, ಈಗಾಗಲೇ ಕೈಗೊಳ್ಳಲಾಗಿರುವ ಪ್ರಯಾಣಿಕರ ಸೌಲಭ್ಯಗಳನ್ನು ಹೆಚ್ಚಿಸುವ ರೈಲ್ವೇ ಯೋಜನೆಗಳು, ರೈಲ್ವೇ ಮೇಲ್ಸೇತುವೆ ಸೇರಿದಂತೆ ಕಾಮಗಾರಿಗಳು ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸುವ ಸಂಬಂಧ ನೈಋತ್ಯ ರೈಲ್ವೆ ವಲಯವ ಮಹಾಪ್ರಬಂಧಕ ಎ.ಕೆ. ಸಿಂಗ್ ಹಾಗೂ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಂಸದ ಬಿ.ವೈ. ರಾಘವೇಂದ್ರ ಅವರು ವಿಡಿಯೋ ಸಂವಾದ ನಡೆಸಿದರು.
ಅವರು ಇಂದು ಜಿಲ್ಲಾ ಪಂಚಾಯಿತಿಯ ಸಹ್ಯಾದ್ರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ರೈಲ್ವೇ ಯೋಜನೆಗಳು ಮತ್ತು ಅನುದಾನದ ಲಭ್ಯತೆ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.
ಈಗಾಗಲೇ ಆರಂಭಿಸಲಾಗಿರುವ ಎಲ್ಲಾ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಆರಂಭಿಸಿ ಪೂರ್ಣಗೊಳಿಸಬೇಕು. ಅದಕ್ಕಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಸೂಚಿಸಿದರು.
ನಿಮ್ಮ ಮಗು ಬುದ್ದಿಶಾಲಿಯಾಗಿ ಹುಟ್ಟಬೇಕೆ? ಸದೃಢ ಮೈಕಟ್ಟು ಹೊಂದಿ ಕಾಂತಿಯುತವಾಗಬೇಕೆ? ಇಲ್ಲಿದೆ ಮಾರ್ಗ
ಮುಂದಿನ ದಿನಗಳಲ್ಲಿ ದೇಶದಾದ್ಯಂತ ರೈಲು ಸಂಚಾರ ಆರಂಭಗೊಳ್ಳುವ ನಿರೀಕ್ಷೆ ಇದ್ದು, ಈಗಿರುವ ರೈಲು ಮಾರ್ಗಗಳು ಮತ್ತು ಸಮಯದಲ್ಲಿ ಬದಲಾವಣೆಯಾಗಬಹುದಾದ ಮಾಹಿತಿ ಇದೆ. ಜಿಲ್ಲೆಯ ಜನರ ಅನುಕೂಲಕ್ಕೆ ಪೂರಕವಾಗಿ, ಪ್ರವಾಸಿಗರು, ಉದ್ಯಮಿಗಳು, ವಿಶೇಷವಾಗಿ ಕೈಗಾರಿಕೋದ್ಯಮಿಗಳು ಹಾಗೂ ವಾಣಿಜ್ಯ ಉದ್ದೇಶವನ್ನು ಗಮನದಲ್ಲಿಟ್ಟುಕೊಂಡು ಗಮನದಲ್ಲಿಟ್ಟುಕೊಂಡು ರೈಲ್ವೇ ಸಂಚಾರ ಎಂದಿನಂತೆ ಮುಂದುವರೆಸುವ ಅಗತ್ಯಕ್ಕೆ ತಕ್ಕಂತೆ ಸಮುಯ ಬದಲಾವಣೆ ಮಾಡುವ ಬಗ್ಗೆಯೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿರುವುದಾಗಿ ಅವರು ತಿಳಿಸಿದರು.
ಈಗಾಗಲೇ ಸ್ಥಗಿತಗೊಳಿಸಿರುವ ರೈಲುಗಳನ್ನು ಕೂಡಲೇ ಪುನರಾರಂಭಿಸುವಂತೆ, ಹಾಗೂ ಪ್ರತಿದಿನ ಬೆಳಿಗ್ಗೆ ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಸಂಚರಿಸುವ ಜನಶತಾಬ್ದಿ ರೈಲನ್ನು ಯಶವಂತಪುರದಿಂದ ಮುಖ್ಯ ನಿಲ್ದಾಣಕ್ಕೆ ಮುಂದುವರೆಸುವ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದೆ. ಚೆನ್ನೈ-ಶಿವಮೊಗ್ಗ ತತ್ಕಾಲ್ ರೈಲನ್ನು ಶಾಶ್ವತವಾಗಿ ಸಂಚರಿಸುವಂತೆ ಮನವಿ ಮಾಡಿರುವುದಾಗಿ ತಿಳಿಸಿದ ಅವರು, ಮುಂದಿನ ಒಂದು ವಾರದಲ್ಲಿ ಶಿವಮೊಗ್ಗ – ರಾಣೆಬೆನ್ನೂರು ಮಾರ್ಗದ ಸರ್ವೇ ಹಾಗೂ ಭೂಸ್ವಾದೀನ ಕಾರ್ಯ ಪೂರ್ಣಗೊಳ್ಳಲಿದ್ದು ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಅಲ್ಲದೇ ಕೋಟೆಗಂಗೂರು ರೈಲ್ವೇ ಟರ್ಮಿನಲ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗಾಗಿ ಭೂಸ್ವಾದೀನ ಕಾರ್ಯ ಪೂರ್ಣಗೊಳ್ಳಲಿದೆ ಎಂದರು.

ಸಾಗರ-ಜಂಬಗಾರು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ ಮತ್ತೊಂದು ಸುಸಜ್ಜಿತ ನಿಲ್ದಾಣವನ್ನು ನಿರ್ಮಿಸಲು ಅನುದಾನ ಒದಗಿಸುವಂತೆ, ಕುಂಸಿ-ಅರಸಾಳು ನಿಲ್ದಾಣಗಳಲ್ಲಿ ಪ್ರಯಾಣಿಕರ ಸೌಲಭ್ಯವನ್ನು ಕಲ್ಪಿಸಲು, ಎಕ್ಸ್‌ಪ್ರೆಸ್ ರೈಲುಗಳನ್ನು ನಿಲುಗಡೆಗೊಳಿಸಲು ಮನವಿ ಮಾಡಿರುವುದಾಗಿ ತಿಳಿಸಿದರು.
ಮುಖ್ಯಮಂತ್ರಿಗಳ ರೈಲ್ವೆ ಸಲಹೆಗಾರ ಶ್ರೀಧರಮೂರ್ತಿ, ನೈಋತ್ಯ ರೈಲ್ವೆಯ ವಿಭಾಗೀಯ ಸಹಾಯಕ ಅಭಿಯಂತರ ಟಿ.ಆರ್. ಬಗಾಡೆ, ಶಾಸಕ ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯೆ ಭಾರತಿಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post