ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರೋಸ್ಟರ್ ಪದ್ಧತಿ ಅನುಸರಿಸದೇ ಪಿಯು ಪ್ರವೇಶ ನೀಡುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಇಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
Also Read: ವಿನೋಬನಗರ ಮಾರುಕಟ್ಟೆ ಜಾಗದಲ್ಲಿ ಸಂಚಾರ ದಟ್ಟಣೆ: ಪರಿಹರಿಸುವಂತೆ ಮನವಿ
ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು, ಪಿಯು ಪ್ರವೇಶಕ್ಕೆ ವಿದ್ಯಾರ್ಥಿಗಳು ಪೋಷಕರು ಮುಂದಾಗಿದ್ದು, ಜಿಲ್ಲೆಯಲ್ಲಿ ಬಹುತೇಕ ಖಾಸಗಿ ಕಾಲೇಜುಗಳಲ್ಲಿ ಸರ್ಕಾರದ ರೋಸ್ಟರ್ ಪದ್ಧತಿ ಅನುಸರಿಸದೇ ಪ್ರವೇಶ ನೀಡಲಾಗುತ್ತಿದೆ ಎಂದು ಪ್ರತಿಭಟನಾನಿರತರು ದೂರಿದರು.
ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಶಿಕ್ಷಣ ಇಲಾಖೆ ರೋಸ್ಟರ್ ಪದ್ಧತಿಯನ್ನು ಜಾರಿಗೊಳಿಸಿತ್ತು. ಆದರೆ, ಈ ಬಾರಿ ಜಿಲ್ಲೆಯ ಬಹುತೇಕ ಖಾಸಗಿ ಕಾಲೇಜುಗಳು ಈ ಪದ್ಧತಿ ಅನುಸರಿಸದೇ ಹೆಚ್ಚು ಹಣ ಕೊಟ್ಟವರಿಗೆ ಸೀಟು ಕೊಡುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಕೂಡಲೇ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಇಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಬಡ ಮತ್ತು ಮಧ್ಯಮ ವರ್ಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ದೊರಕುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.
ಕೂಡಲೇ ಇಲಾಖೆಯಿಂದ ಕ್ರಮ ಕೈಗೊಳ್ಳದಿದ್ದಲ್ಲಿ ಎನ್’ಎಸ್’ಯುಐ ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗೆ ತೀವ್ರ ಪ್ರತಿಭಟನೆ ನಡೆಸುತ್ತದೆ ಎಂದು ಎಚ್ಚರಿಕೆ ನೀಡಿದರು.
Also Read: ಮಾಜಿ ಸಿಎಂ ಸಿದ್ಧರಾಮಯ್ಯ ಅಲೆಮಾರಿ: ಕೆ.ಎಸ್. ಈಶ್ವರಪ್ಪ ಕಟಕಿ
ಈ ಸಂದರ್ಭದಲ್ಲಿ ಎನ್’ಎಸ್’ಯುಐ ಜಿಲ್ಲಾಧ್ಯಕ್ಷ ವಿಜಯ್, ನಗರ ಅಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ ಹರ್ಷಿತ್ ಗೌಡ, ಗಿರೀಶ್, ಕಾಟಿಕೆರೆ ರವಿ, ಚಂದ್ರೋಜಿ ರಾವ್, ಸೂರಜ್, ಆಕಾಶ್, ತೌಫಿಕ್, ಅಭಿ, ಸಾಗರ್, ಚರಣ್, ದೀಕ್ಷಿತ್, ಪ್ರಮೋದ್, ಸಮರ್ಥ್, ಸೋನು ಮೊದಲಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post