ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ರಿಪ್ಪನ್’ಪೇಟೆ: ಇಲ್ಲಿನ ಲೆಕ್ಕಾಧಿಕಾರಿ ರಾಘವೇಂದ್ರ ಎನ್ನುವವರು ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾನೆ.
ಹೊಸನಗರ ತಾಲೂಕಿನ ರಿಪ್ಪನ್’ಪೇಟೆಯ ಗ್ರಾಮ ಲೆಕ್ಕಾಧಿಕಾರಿ ರಾಘವೇಂದ್ರ ಎನ್ನುವವನು ಕೆದ್ದಲಗುಡ್ಡೆ ಗ್ರಾಮದ ನಿವಾಸಿ ಜೋಸೆಫ್ ಚಾಕೋ ಎನ್ನುವವರಿಂದ ಖಾತೆ ಬದಲಾವಣೆಗೆ ಒಂದು ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದನು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಚಾಕೋ ಅವರು ಎಸಿಬಿಗೆ ದೂರು ನೀಡಿದ್ದರು. ಇಂದು ಲಂಚ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ರಾಘವೇಂದ್ರ ವಿರುದ್ಧ ಪ್ರಕರಣ ದಾಖಲಿಸಿ, ಆತನನ್ನು ಬಂಧಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post