ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಸೇರಿಯನ್ ಮಾಡಲು 8 ಸಾವಿರ ರೂ. ಹಣ ಪಡೆಯುತ್ತಿರುವುದಾಗಿ ಗಮನಕ್ಕೆ ಬಂದಿದ್ದು, ಈ ರೀತಿ ಮುಂದುವರೆದರೆ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ಹರತಾಲು ಹಾಲಪ್ಪ ಎಚ್ಚರಿಕೆ ನೀಡಿದರು.
ಸಾಗರ ಉಪವಿಭಾಗೀಯ ಆಸ್ಪತ್ರೆ ವ್ಯವಸ್ಥೆ ಬಗ್ಗೆ ಸಾರ್ವಜನಿಕ ದೂರು ಬಂದ ಹಿನ್ನೆಲೆಯಲ್ಲಿ ವೈದ್ಯರೊಂದಿಗೆ ಸಭೆ ನಡೆಸಿ ಸಿಸೇರಿಯನ್ ಮಾಡಲು 8 ಸಾವಿರ ರೂ. ಹಣ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ ಇದ್ದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.
ಶಿವಮೊಗ್ಗ ಜಿಲ್ಲಾಸ್ಪತ್ರೆ ನಂತರದ ಸ್ಥಾನ ಸಾಗರದ ಆಸ್ಪತ್ರೆಗೆ ಇದೆ. ಸಾವಿರಾರು ಜನ ಚಿಕಿತ್ಸೆ ಆಗಮಿಸುತ್ತಾರೆ, ಅವರಿಗೆ ಸೂಕ್ತವಾಗಿ ಸ್ಪಂದಿಸಿ ಆಸ್ಪತ್ರೆಯ ಹೆಸರನ್ನು ಉಳಿಸಬೇಕಾಗಿದ್ದು ವೈದ್ಯರ ಕರ್ತವ್ಯ ಎಂದರು.
ನಿರ್ಧಿಷ್ಟ ಸಮಯಕ್ಕೆ ಕೆಲಸಕ್ಕೆ ಹಾಜರಾಗದ ಸಿಬ್ಬಂದಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ನಂತರ ಎಂಎಸ್’ಐಎಲ್ ವತಿಯಿಂದ ಆಸ್ಪತ್ರೆಗೆ ಲಿಫ್ಟ್ ಅಳವಡಿಸಲು, ಅಂದಾಜು ಪಟ್ಟಿ ತಯಾರಿಸಲಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದರು.
ಈ ಸಂದರ್ಭದಲ್ಲಿ ಉಪವಿಭಾಗಧಿಕಾರಿಗಳು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news










Discussion about this post