ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಜೋಗ: ಲಿಂಗನಮಕ್ಕಿ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಮೈಕ್ ಮೂಲಕ ಸೂಚನೆ ನೀಡಲಾಗುತ್ತಿದೆ.
ಬಂಗಾಳಕೊಲ್ಲಿ ಸೈಕ್ಲೋನ್ ಪರಿಣಾಮವಾಗಿ ಶಿವಮೊಗ್ಗ ನಗರ ಸೇರಿದಂತೆ ಇಡಿಯ ಮಲೆನಾಡಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಲಿಂಗನಮಕ್ಕಿ ಡ್ಯಾಂ ಜಲಾನಯನ ಪ್ರದೇಶದಲ್ಲಿಯೂ ನಿರಂತರ ಮಳೆಯಾಗುತ್ತಿದ್ದು, ತಾಲೂಕು ಆಡಳಿತದ ವತಿಯಿಂದ ನದಿಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗುತ್ತಿದೆ.
ಕಾರ್ಗಲ್, ಲಿಂಗನಮಕ್ಕಿ ಗಿಳಲಗುಂಡಿ, ಯಡೇಹಳ್ಳಿ, ಮರಳ್ ಕೋರೆ, ಅಂಬುಗಳಲೇ, ಗ್ರಾಮಗಳ ಜನರಿಗೆ ಎಚ್ಚರಿಕೆ ನೀಡಲಾಗುತ್ತಿದೆ.
ಅ. 18 ರಂದು ಲಿಂಗನಮಕ್ಕಿ ಡ್ಯಾಂ ಕ್ರೆಸ್ಟ್ ಗೇಟು ತೆರೆಯುವ ಸಾಧ್ಯತೆಯಿದ್ದು ಈ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಲಾಗುತ್ತಿದೆ. ಈಗಾಗಲೇ, 1815.95 ಅಡಿಗೆ ಡ್ಯಾಂನ ನೀರಿನ ಮಟ್ಟ ತಲುಪಿದೆ. ಜಲಾಶಯದ ಪೂರ್ಣ ಮಟ್ಟ 1819 ಅಡಿಗಳಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post