ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ಸಂಘಟನಾತ್ಮಕ ಯೋಜನೆ ಹಾಗೂ ಕೆಲಸದಿಂದ ಎಲ್ಲ ಹಂತದಲ್ಲೂ ಸಹ ಯಶಸ್ಸು ಸಾಧ್ಯ ಎಂದು ಎಂಎಸ್’ಐಎಲ್ ಅಧ್ಯಕ್ಷ, ಶಾಸಕ ಹರತಾಳು ಹಾಲಪ್ಪ ಅಭಿಪ್ರಾಯಪಟ್ಟರು.
ವರದಮೂಲದಲ್ಲಿ ಆಯೋಜಿಸಿದ್ದ ಬಿಜೆಪಿ ಗ್ರಾಮಾಂತರ ಮಂಡಲದ ಪ್ರಶಿಕ್ಷಣ ವರ್ಗದ ಸಮರೋಪ ಸಮಾರಂಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಂಘ ಪರಿವಾರ ಹಾಗೂ ಪಕ್ಷದ ಹಿರಿಯರು ಈಗಿನ ರಾಜಕೀಯ ಸ್ಥಿತಿಗತಿಗಳನ್ನು ಅವಲೋಕಿಸಿ ಕಾಲ ಕಾಲಕ್ಕೆ ಸೂಚನೆಗಳನ್ನು ನೀಡುತ್ತಾರೆ. ಅವುಗಳನ್ನು ಕ್ರಮಬದ್ಧವಾಗಿ ಪಾಲಿಸಿಕೊಂಡು, ಸಂಘಟನಾತ್ಮಕವಾಗಿ ಕೆಲಸ ಮಾಡಿದರೆ ಎಲ್ಲಾ ಹಂತದಲ್ಲೂ ಪಕ್ಷ ಯಶಸ್ಸು ಕಾಣಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ನಗರ ಮತ್ತು ಗ್ರಾಮ ಮಂಡಲದ ಅಧ್ಯಕ್ಷರು, ಜಿಲ್ಲಾ ಪ್ರಮುಖರು, ತಾಲೂಕು ವಿವಿಧ ಮೋರ್ಚಾ, ಪ್ರಕೋಷ್ಟಗಳ ಪ್ರಮುಖರು, ಪದಾಧಿಕಾರಿಗಳು, ಅಪೇಕ್ಷಿತ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ಆನಂತರ, ಸಾಗರದಲ್ಲಿ ವೀರೇಂದ್ರ ಪಾಟೀಲ್ ಅವರು ಇತ್ತೀಚೆಗೆ ಪ್ರಾರಂಭಿಸಿರುವ, ಸಾಗರ್ ಹೋಟೆಲ್’ಗೆ ಭೇಟಿ ನೀಡಿ ಶುಭ ಹಾರೈಸಿದರು. ಮೈತ್ರಿ ವೀರೇಂದ್ರ ಪಾಟೀಲ್, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮತ್ತಿತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post