ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ಸಹ್ಯಾದ್ರಿ ವಿಜ್ಞಾನ ಘಟಕ ಕಾಲೇಜಿನಲ್ಲಿ 2020-21ನೇ ಸಾಲಿನಿಂದ ಸ್ನಾತಕೋತ್ತರ ಭೌತಶಾಸ್ತ್ರ ಪದವಿ ಕೋರ್ಸ್ ಪ್ರಾರಂಭವಾಗಲಿದ್ದು, ಅರ್ಹ ವಿದ್ಯಾರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಶೈಕ್ಷಣಿಕ ವಿಭಾಗದಲ್ಲಿ ಅರ್ಜಿಗಳನ್ನು ಪಡೆದುಕೊಳ್ಳಬಹುದು. ಸಾಮಾನ್ಯ ವಿದ್ಯಾರ್ಥಿಗಳಿಗೆ 500 ರೂ. ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳಿಗೆ 300 ರೂ. ಅರ್ಜಿ ಶುಲ್ಕವಿರುತ್ತದೆ.
ಭರ್ತಿ ಮಾಡಿದ ಅರ್ಜಿಗಳನ್ನು ವಿಶ್ವವಿದ್ಯಾಲಯದ ಸ್ನಾತಕೋತ್ತರ ಭೌತಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷರಿಗೆ ಜನವರಿ 02ರ ಒಳಗೆ ಸಲ್ಲಿಸಬಹುದು.
ಈ ಹಿಂದಿನ ಪ್ರವೇಶಾತಿ ಪ್ರಕಟಣೆಯಲ್ಲಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಮತ್ತೊಮ್ಮೆ ಸಲ್ಲಿಸುವ ಅಗತ್ಯವಿರುವುದಿಲ್ಲ. ಅರ್ಹ ಅಭ್ಯರ್ಥಿಗಳಿಗೆ ಜ.5ರಂದು ಜ್ಞಾನಸಹ್ಯಾದ್ರಿಯ ಭೌತಶಾಸ್ತ್ರ ವಿಭಾಗದಲ್ಲಿ ಕೌನ್ಸೆಲಿಂಗ್ ಮೂಲಕ ನಿಯಮಾನುಸಾರ ಪ್ರವೇಶ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಶೈಕ್ಷಣಿಕ ವಿಭಾಗದ ಉಪಕುಲಸಚಿವ ಡಾ. ಗೋವಿಂದರಾಜು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post