No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆಧ್ಯಾತ್ಮಿಕತೆಯಿಂದ ವಿಶ್ವದಲ್ಲಿ ಬದಲಾವಣೆ ತೋರಿಸಿಕೊಟ್ಟ ಸಂತ ವಿವೇಕಾನಂದರು: ಯಾದವ ಕೃಷ್ಣ ಅಭಿಮತ

ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿವೇಕಾನಂದರ 158ನೆಯ ಜಯಂತಿ

kalpa News by kalpa News
January 12, 2021
in ಶಿವಮೊಗ್ಗ
0
ಆಧ್ಯಾತ್ಮಿಕತೆಯಿಂದ ವಿಶ್ವದಲ್ಲಿ ಬದಲಾವಣೆ ತೋರಿಸಿಕೊಟ್ಟ ಸಂತ ವಿವೇಕಾನಂದರು: ಯಾದವ ಕೃಷ್ಣ ಅಭಿಮತ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಆಧ್ಯಾತ್ಮಿಕತೆಯಿಂದ ಅಮೂಲಾಗ್ರ ಬದಲಾವಣೆ ತರಬಹುದು ಎಂಬುದನ್ನು ಪ್ರಪಂಚಕ್ಕೆ ತೋರಿಸಿಕೊಟ್ಟ ಮಹಾನ್ ಸಂತ ಶ್ರೀ ಸ್ವಾಮಿ ವಿವೇಕಾನಂದರು ಎಂದು ಆರ್’ಎಸ್’ಎಸ್ ಪ್ರಾಂತ್ಯ ಸಹ ಸಂಪರ್ಕ ಪ್ರಮುಖ್ ಯಾದವ ಕೃಷ್ಣ ಅಭಿಪ್ರಾಯಪಟ್ಟರು.

ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ಆಯೋಜಿಸಿದ್ದ ಶ್ರೀ ಸ್ವಾಮಿ ವಿವೇಕಾನಂದರ 158ನೆಯ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಡಿ ದೇಶದ ಇತಿಹಾಸ ನೋಡಿದಾಗ ವಿವೇಕಾನಂದರ ವಿಭಿನ್ನವಾಗಿ ನಿಲ್ಲುವ ನಾಯಕ. ಇಡಿಯ ಸಮಾಜವನ್ನು ಒಟ್ಟಾಗಿ ಕೊಂಡೊಯ್ದ ನಾಯಕರಾಗಿದ್ದ ಅವರು, ದೇಶದಲ್ಲಿ ಆಧ್ಯಾತ್ಮಿಕವಾಗಿ ಎಲ್ಲರನ್ನೂ ಒಂದಾಗಿಸಲು ಯತ್ನಿಸಿದ ದಾರ್ಶನಿಕ ಎಂದು ಅಭಿಪ್ರಾಯಪಟ್ಟರು.

ದೇಶದ ಯಾವುದೇ ಮೂಲೆಯಲ್ಲಿ ಯಾವುದೇ ಗ್ರಾಮಕ್ಕೆ ತೆರಳಿದರೂ ವಿವೇಕಾನಂದರ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿದ್ದು, ಅವರು ಆದರ್ಶಪ್ರಾಯರಾಗಿಯೇ ಇದ್ದಾರೆ.

ನಮ್ಮ ದೇಶದಲ್ಲಿ ಇತಿಹಾಸ ನಿರ್ಮಿಸಿದ ಮಹಾನ್ ಪುರುಷರ ಅಂಕೆ ಲೆಕ್ಕ ಹಾಕಿದರೆ ಇಡಿಯ ವಿಶ್ವದಲ್ಲಿರುವ ಮಹಾನ್ ವ್ಯಕ್ತಿಗಳ ಸಂಖ್ಯೆಗಿಂತಲೂ ಹೆಚ್ಚಾಗಿದೆ. ಇದು ನಮ್ಮ ದೇಶದ ಮಣ್ಣಿನ ಗುಣದ ಪ್ರಭಾವ. ಇಂತಹ ಇತಿಹಾಸ ನಿರ್ಮಿಸಿದ ದೇಶದ ಮಹಾನ್ ಪುರುಷರಲ್ಲಿ ವಿವೇಕಾನಂದರೂ ಸಹ ಒಬ್ಬರು ಎನ್ನುವುದು ನಮ್ಮ ಹೆಮ್ಮೆ ಎಂದರು.


ಇತಿಹಾಸ ಅಧ್ಯಯನ ಮಾಡುವಾಗ ವಿವೇಕಾನಂದ ಕುರಿತು ಓದಲೇಬೇಕು. ಅಧ್ಯಾತ್ಮಿಕತೆಯಿಂದ ಪ್ರಪಂಚದಲ್ಲಿ ಬದಲಾವಣೆ ತರಬಹುದು ಎಂಬ ಶ್ರೇಷ್ಠ ವಿಚಾರಧಾರೆಯನ್ನು ತೋರಿಸಿಕೊಟ್ಟ ಮಹಾನ್ ಸಂತ ವಿವೇಕಾನಂದರು. ಅವರ ಜೀವನ ಎನ್ನುವುದು ಅದೊಂದು ದೊಡ್ಡ ಸಾಗರ ಎಂದು ಅಭಿಪ್ರಾಯಪಟ್ಟರು.

ಇಂದು ಜಗತ್ತಿನ ಎಲ್ಲ ರಾಷ್ಟ್ರಗಳು ಭಯದಿಂದ ನರಳುತ್ತಿದ್ದು, ಅದರಿಂದ ಹೊರ ಬರಲು ಹೆಣಗುತ್ತಿವೆ. ಆದರೆ, ನಮ್ಮ ದೇಶದ ಮಾತ್ರ ಪರಂಪರೆ ಹಾಕಿ ಕೊಟ್ಟ ವಿಚಾರಧಾರೆಗಳಿಂದ ಮಾತ್ರ ಎಲ್ಲವನ್ನೂ ಗೆಲ್ಲಲು ಸಾಧ್ಯ ಎಂದರು.

ಧರ್ಮ ಎನ್ನುವುದು ಅಧ್ಯಾತ್ಮಿಕತೆ ಒಂದು ಭಾಗ. ಧರ್ಮದ ಆಚರಣೆಗಳು ಅಧ್ಯಾತ್ಮಿಕತೆಯಲ್ಲಿ ಶೇ.2ರಷ್ಟಿರುತ್ತದೆ. ಆದರೆ, ಅಧ್ಯಾತ್ಮಿಕತೆಯಲ್ಲಿ ಧಾರ್ಮಿಕ ಚಿಂತನೆ ಹಾಗೂ ಆಚರಣೆ ಶೇ.98ರಷ್ಟಿರುತ್ತದೆ. ಇದನ್ನು ಭಾರತ ಎಂದು ಸಂಪೂರ್ಣವಾಗಿ ತೆಗೆದುಕೊಳ್ಳುತ್ತದೋ ಆಗ ವಿಶ್ವ ಭಾರತದತ್ತ ನೋಡುತ್ತದೆ ಎಂದು ವಿವೇಕಾನಂದರು ಹೇಳಿದ್ದನ್ನು ಅವರು ಉಲ್ಲೇಖಿಸಿದರು.


158 ವರ್ಷದ ನಂತರವೂ ಸಹ ವಿವೇಕಾನಂದರು ತಮ್ಮ ವಿಚಾರಧಾರೆಗಳ ಮೂಲಕ ಜೀವಂತವಿದ್ದಾರೆ ಎಂದರೆ ಅವರ ಚೇತನ ಎಂತಹುದ್ದು ಎಂಬುದು ತಿಳಿಯುತ್ತದೆ. ಶಕ್ತಿಯೇ ಜೀವನ, ದೌರ್ಬಲ್ಯವೇ ಮರಣ ಎಂಬುದನ್ನು ವಿವೇಕಾನಂದರು ಜಗತ್ತಿಗೆ ಸಾರಿದರು ಎಂದರು.

ಫಿಜಿಷಿಯನ್ ಡಾ.ಶ್ರೀಕಾಂತ್ ಹೆಗಡೆ ಅವರು ಮಾತನಾಡಿ, ಕೊರೋನಾ ವೈರಸ್ ಕಂಡು ಹಿಡಿಯಲು ಮೊದಲ ಬಾರಿಗೆ ಆರ್’ಟಿಪಿಸಿಆರ್ ಪದ್ದತಿ ಕಂಡು ಹಿಡಿದು ಡಬ್ಲ್ಯೂಎಚ್’ಒ ವಿಶ್ವಕ್ಕೆ ಕೊಟ್ಟಿದ್ದು 12 2020ರಲ್ಲಿ. ಅದೇ ರೀತಿ ಮೊದಲ ವ್ಯಾಕ್ಸಿನ್ ಇಂದು ಅಂದರೆ 12 2021ರಂದು ಪುಣೆಯಲ್ಲಿ ವಿತರಣೆ ಮಾಡಲಾಗುತ್ತಿದೆ ಎಂದರು.

ಜಾಗತಿಕ ಮಟ್ಟಕ್ಕೆ ಹೋಲಿಕೆ ಮಾಡಿದರೆ ನಮ್ಮ ದೇಶದಲ್ಲಿ ಶೇ.2.3ರಷ್ಟು ಮಾತ್ರ ಕೋವಿಡ್19ರಿಂದಾಗಿ ಸಾವು ಸಂಭವಿಸಿದೆ. ಕೊರೋನಾ ಕುರಿತಾಗಿ ಲಕ್ಷಣಗಳ ಆಧಾರದಲ್ಲಿ ಚಿಕಿತ್ಸೆ ಗೊತ್ತಿರಲಿಲ್ಲ. ಹೀಗಾಗಿ, ಸಾಮಾಜಿಕ ಅಂತರ, ಸ್ಯಾನಿಟೈಸ್ ಹಾಗೂ ಮಾಸ್ಕ್‌ ಧರಿಸುವ ಕ್ರಮಗಳನ್ನು ಅಳವಡಿಸಿಕೊಳ್ಳುವುದು ಅನಿವಾರ್ಯವಾಗಿತ್ತು ಎಂದರು.

ಎಲ್ಲ ದೇಶಗಳಂತೆ ನಮ್ಮ ದೇಶವೂ ಸಹ ವ್ಯಾಕ್ಸಿನೇಷನ್ ಕಂಡುಹಿಡಿದಿದೆ. ಮನುಕುಲವನ್ನು ಉಳಿಸಿಕೊಳ್ಳಲು ಪ್ರತಿಯೊಬ್ಬರೂ ವ್ಯಾಕ್ಸಿನೇಷನ್ ಮಾಡಿಕೊಳ್ಳುವುದು ಅನಿವಾರ್ಯ ಎಂದ ಅವರು, ಇದನ್ನು ಯಾಕೆ ತೆಗೆದುಕೊಳ್ಳಬೇಕು, ಅದರ ಪರಿಣಾಮಗಳೇನು ಎಂಬುದನ್ನು ವಿವರಿಸಿದರು.

ಸಾಮಾನ್ಯ ಜನರಲ್ಲಿ ವ್ಯಾಕ್ಸಿನೇಷನ್ ಕುರಿತಾಗಿ ಇರುವ ತಪ್ಪು ಕಲ್ಪನೆಗಳನ್ನು ವೈದ್ಯಕೀಯ ವೃತ್ತಿಯಲ್ಲಿರುವವರು ಹೋಗಲಾಡಿರುವ ಪ್ರಯತ್ನ ಮಾಡಬೇಕು. ಈ ಕುರಿತಂತೆ ತಿಳುವಳಿಕೆ ನೀಡುವ ಕೆಲಸವನ್ನು ಮಾಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸಿಮ್ಸ್‌ ವೈದ್ಯಕೀಯ ಅಧೀಕ್ಷಕ ಡಾ.ಎಸ್. ಶ್ರೀಧರ್, ಎಸ್’ಯುಐಎಂಎಸ್ ಪ್ರಾಂಶುಪಾಲ ಡಾ.ಎಸ್.ಎಂ. ಕಟ್ಟಿ, ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಡಾ.ಆರ್.ಪಿ. ಪೈ, ಉಪಪ್ರಾಂಶುಪಾಲ ಡಾ.ಸಿದ್ದಲಿಂಗಪ್ಪ, ವೈದ್ಯಕೀಯ ನಿರ್ದೇಶಕರಾ ಡಾ.ಎಸ್. ನಾಗೇಂದ್ರ, ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಲತಾ ನಾಗೇಂದ್ರ ಹಾಗೂ ಡಾ.ವಿನಯಾ ಶ್ರೀನಿವಾಸ್, ಉಪಪ್ರಾಂಶುಪಾಲ ಡಾ.ಕೆ.ಎಂ. ಮಿಥುನ್, ದಂತ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಬಿ.ಎಸ್. ಸುರೇಶ್ ಸೇರಿದಂತೆ ಹಲವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaShimogaShivamoggaShivamogga NewsSubbaiah Medical College ShivamoggaSwami VivekanandaVivekananda Jayantiಮಲೆನಾಡು ಸುದ್ಧಿವಿವೇಕಾನಂದ ಜಯಂತಿಶಿವಮೊಗ್ಗಶಿವಮೊಗ್ಗ ನ್ಯೂಸ್ಶ್ರೀ ಸ್ವಾಮಿ ವಿವೇಕಾನಂದ
Share230Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉರಗ ಪ್ರೇಮಿ ಪ್ರಭಾಕರ್ ಮೇಲೆ ಕಾಳಿಂಗ ಸರ್ಪ ದಾಳಿ: ಕೂದಲೆಳೆ ಅಂತರದಲ್ಲಿ ಎಸ್ಕೇಪ್

Next Post

ಜ.16ರಂದು ಭದ್ರಾವತಿಗೆ ಅಮಿತ್ ಶಾ: ಆರ್’ಎಎಫ್ ಘಟಕಕ್ಕೆ ಶಂಕುಸ್ಥಾಪನೆ

kalpa News

kalpa News

Next Post
ಜ.16ರಂದು ಭದ್ರಾವತಿಗೆ ಅಮಿತ್ ಶಾ: ಆರ್’ಎಎಫ್ ಘಟಕಕ್ಕೆ ಶಂಕುಸ್ಥಾಪನೆ

ಜ.16ರಂದು ಭದ್ರಾವತಿಗೆ ಅಮಿತ್ ಶಾ: ಆರ್’ಎಎಫ್ ಘಟಕಕ್ಕೆ ಶಂಕುಸ್ಥಾಪನೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL